ಪುತ್ತೂರು:ನಿನ್ನೆ ನಡೆದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ!! ಪ್ರತಿಭಟನೆಯ ಬೆನ್ನಲ್ಲೇ ಮತ್ತೆ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

Share the Article

ಪುತ್ತೂರು: ನಿನ್ನೆ ಪುತ್ತೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿಗೆ ಸಂಬಂಧಪಡದ ಸಂಘಟನೆ ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸುತ್ತಿದ್ದ ಘಟನೆಯನ್ನು ಖಂಡಿಸಿ ಇಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದೆ ಎನ್ನಲಾಗಿದ್ದು, ಗಾಯಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊಟೆದಾಟದಲ್ಲಿ ಮೂವರು ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಘಟನೆಗೆ ನಡೆಯುತ್ತಿದ್ದಂತೆ ಪೊಲೀಸರು ಗುಂಪು ಚದುರಿಸಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply