ರಾಜ್ಯದ ಏಳು ಜಿಲ್ಲೆ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್|ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ದೊರೆಯಲಿದೆ ಮೊಟ್ಟೆ, ಬಾಳೆಹಣ್ಣು
ಬೆಂಗಳೂರು : ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆಯಲ್ಲಿ 1 ರಿಂದ 8ನೇ ತರಗತಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಆರೋಗ್ಯದ ದೃಷ್ಟಿಯಿಂದ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ,7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ , ಕಲಬುರಗಿ, ವಿಜಯಪುರ, ಬಳ್ಳಾರಿ ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದ್ದು,ಈ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್ ಜಿಲ್ಲೆಯಲ್ಲಿ ಶೇಕಡಾ 69.1, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 72.3, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.