ತನಿಖಾಧಿಕಾರಿಗಳ ಮುಂದೆ ಕಣ್ಣೀರು ಹಾಕಿ ಮೆತ್ತಗಾದ ಹಂಸಲೇಖ | ಪ್ರಚಾರಕ್ಕಾಗಿ ಹಂಸಲೇಖಾರ ಜುಬ್ಬದ ತುದಿ ಹಿಡಿದು ಭಿಕ್ಷುಕನಂತೆ ಓಡಿ ಬಂದ ಚೇತನ್, ಹಿಂದೂ ಸಂಘಟನೆಗಳ ಪ್ರತಿಭಟನೆ !

ಬೆಂಗಳೂರು: ಪೇಜಾವರ ಮಠದ ದಿವಂಗತ ಸ್ವಾಮೀಜಿ ವಿಶ್ವೇಶ ತೀರ್ಥರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬಸವನಗುಡಿ ಠಾಣೆ ಪೊಲೀಸರು ನಿನ್ನೆ ಗುರುವಾರ ವಿಚಾರಣೆಗೆ ಒಳಪಡಿಸಿದರು. ಈ ವೇಳೆ ತಾವು ನೀಡಿದ ಹೇಳಿಕೆಯ ಬಗ್ಗೆ ಹಂಸಲೇಖ ಬೇಸರ ವ್ಯಕ್ತಪಡಿಸಿದರು. ಮಾತ್ರವಲ್ಲದೇ, ತನಿಖಾಧಿಕಾರಿ ಮುಂದೆ ಕಣ್ಣೀರು ಹಾಕಿದರು ಎಂದು ಮೂಲಗಳು ಹೇಳಿವೆ.

ಆ ರೀತಿ ನಾನು ಯಾಕೆ ಹೇಳಿದೆನೋ ಗೊತ್ತಿಲ್ಲ. ನನಗೆ ಅಂಥ ಯಾವ ಉದ್ದೇಶವೂ ಇರಲಿಲ್ಲ. ಮಾತಿನ ಭರದಲ್ಲಿ ಹೇಳಿದೆ. ನನ್ನ ಹೇಳಿಕೆಗೆ ನನ್ನ ಹೆಂಡತಿಯೇ ಬೇಸರ ವ್ಯಕ್ತಪಡಿಸಿದರು. ನನ್ನ ಜೀವನದಲ್ಲಿ ಎಂದೂ ಹೀಗೆ ಮಾಡಿಕೊಂಡಿರಲಿಲ್ಲ. ನಾನು ಅಂಥ ಹೇಳಿಕೆ ನೀಡಿದ್ದರಿಂದ ತಪ್ಪಾಗಿದೆ ಎಂದು ಹಂಸಲೇಖ ಹೇಳಿದ್ದಾರೆ. ಯಾವುದೇ ಧರ್ಮ ಅಥವಾ ಜಾತಿಯನ್ನು ನಿಂದಿಸುವ ಉದ್ದೇಶ ನನಗೆ ಇರಲಿಲ್ಲ. ಈ ಹೇಳಿಕೆಯಿಂದಾಗಿ ವೃತ್ತಿಯಲ್ಲಿಯೂ ನನಗೆ ಹಿನ್ನಡೆ ಉಂಟಾಗಿದೆ. ತುಂಬಾ ನೋವು ಅನುಭವಿಸಿದ್ದೇನೆ ಎಂದು ಹಂಸಲೇಖ ತನಿಖಾಧಿಕಾರಿ ಎದುರು ಕಣ್ಣೀರು ಹಾಕಿದರು. ನಂತರ ಐದು ನಿಮಿಷ ಸುಧಾರಿಸಿಕೊಂಡು ಕಣ್ಣೊರೆಸಿಕೊಂಡು ಸಮಾಧಾನ ಮಾಡಿಕೊಂಡರು ಎಂದು ಮೂಲಗಳು ತಿಳಿಸಿವೆ.

ಆದರೆ ಈ ಮಧ್ಯೆ, ಪ್ರಚಾರದ ತೆವಳಿನ ನಟ ಚೇತನ್ ಹಂಸಲೇಖ ಅವರು ವಿಚಾರಣೆಗೆ ಹಾಜರಾಗುವ ಸಂದರ್ಭ, ಎಲ್ಲರೂ ಬನ್ನಿ ಎಂದು ಜನ ಸಮುದಾಯಕ್ಕೆ ಪ್ರೋವೊಕ್ ಮಾಡಿದ್ದು ಅಲ್ಲದೆ ತಾನೂ ಹಂಸಲೇಖ ಅವರ ಜೊತೆ ಸಾಗಲು ನಿರ್ಧರಿಸಿದ್ದು ಹಿಂದೂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿತ್ತು. ವಿಚಾರಣೆ ನಡೆಯುವ ಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಿಂದೂ ಪರ ಹೋರಾಟಗಾರರು ನಿಂತಿದ್ದರು.

ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಂಸಲೇಖ, ಪೇಜಾವರ ಶ್ರೀಗಳ ಬಗ್ಗೆ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು. ಫೇಸ್ಬುಕ್​ನಲ್ಲಿ ಜನರು ವಿವಿಧ ರೀತಿಯ ಕಮೆಂಟ್​ಗಳನ್ನು ಮಾಡಿ ವಿಡಿಯೋ ಹಂಚಿಕೊಂಡಿದ್ದರು.

ಈ ವಿವಾದವನ್ನು ಉದ್ದೇಶಿಸಿ ಕ್ಷಮೆ ಕೇಳುವ ಮೂಲಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಗೊತ್ತಿದೆ. ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು. ಆ ವೇದಿಕೆಯಲ್ಲಿ ನುಡಿದರೆ ಮುತ್ತಿನಹಾರದಂತಿರಬೇಕು ಎಂದು ಇರಬೇಕಿತ್ತು. ಆದರೆ, ತಪ್ಪಾಗಿದೆ. ಅಸ್ಪ್ರಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಈ ಅನಿಷ್ಠವನ್ನು ತೊಡೆದು ಹಾಕುವುದಕ್ಕೆ ಪೇಜಾವರರಂಥ ಗುರುಹಿರಿಯರು ಅಪಾರ ಪ್ರಯತ್ನ ನಡೆಸುತ್ತಿದ್ದಾರೆ. ಅದರ ಬಗ್ಗೆ ನನಗೆ ಆ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದ್ದರು. ನಾನು ಒಬ್ಬ ಸಂಗೀತಗಾರ. ನಮಗ್ಯಾಕೆ ಟ್ರೋಲು, ಕಂಟ್ರೋಲ್ ಆಗಿರುವುದು ನಮ್ಮ ಕೆಲಸ. ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರವೂ ಯಾವುದೇ ಮೂಲಕ ಇದ್ದರೆ ಅದನ್ನು ನಾನು ಮಾಡಿಯೇ ಮಾಡ್ತೇನೆ ಎಂದು ತಿಳಿಸಿದ್ದರು.

ಹಂಸಲೇಖ ಹೇಳಿಕೆಯನ್ನು ಖಂಡಿಸಿದ್ದ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಹಂಸಲೇಖ ನನ್ನ ಗುರುಗಳನ್ನು ಟೀಕೆ ಮಾಡಿರಬಹುದು. ಹಂಸಲೇಖ ಬಾಯಲ್ಲಿ ಇಂತಹ ಮಾತು ಬರಬಾರದಿತ್ತು. ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ. ಪ್ರಚಾರಕ್ಕಾಗಿ ಸಾಕಷ್ಟು ಜನರು ಹೀಗೆ ಮಾಡುತ್ತಾರೆ. ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ. ನಮ್ಮ ಉದ್ದೇಶ ಪ್ರಾಮಾಣಿಕವಾಗಿದೆ ಎಂದು ಹೇಳಿದ್ದರು. ಪೇಜಾವವರ ಬಗ್ಗೆ ಹಂಸಲೇಖ ಹೇಳಿಕೆಯನ್ನು ಖಂಡಿಸಿ ಬ್ರಾಹ್ಮಣ ಮಹಾಸಭಾ ಮತ್ತು ಪೇಜಾವರ ಮಠದ ಭಕ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Leave A Reply

Your email address will not be published.