ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

Share the Articleಬಂಟ್ವಾಳ:ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ.ರಶ್ಮಿತ ಬೆಳಿಗ್ಗೆ ದೇವರಿಗೆ ಪೂಜೆ ಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.