ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ | ಹೆಚ್ಚುತ್ತಿರುವ ಕೋವಿಡ್,ಓಮಿಕ್ರಾನ್ ರೂಪಾಂತರಿ ವೈರಸ್ ಹಿನ್ನೆಲೆ : ತೆಗೆದುಕೊಂಡ ಪ್ರಮುಖ ನಿರ್ಣಯ

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನ.27ರಂದು ಸಂಜೆ ಕೃಷ್ಣಾದಲ್ಲಿ ನಡೆಯಿತು.
ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

• ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.

  • ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.

*ಕೊಡಗು, ದಕ್ಷಿಣ ಕನ್ನಡ, ಮೈಸೂರು ಮತ್ತು ಚಾಮರಾಜ ನಗರ ಗಡಿಗಳಲ್ಲಿ ಕಟ್ಟೆಚ್ಚರ , ತಪಾಸಣೆ ತೀವ್ರ .

  • ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.
  • 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು
  • ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು.

• ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.

*ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.

• ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.

• ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು

• ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.

  • ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.
  • ಕಾಲೇಜುಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮ ಮುಂದೂಡಲು ಸಲಹೆ

Leave A Reply

Your email address will not be published.