ಮಂಗಳೂರು: ಬಾಡಿಗೆ ಮನೆಯಲ್ಲಿ ಅನೈತಿಕ ಚಟುವಟಿಕೆ, ಮಹಿಳೆ ಸಹಿತ ಇಬ್ಬರ ಬಂಧನ

ಮಂಗಳೂರು : ಬಾಡಿಗೆ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಇಬ್ಬರು ದಲ್ಲಾಳಿಗಳನ್ನು ಬಂಧಿಸಿದ್ದಾರೆ.

 

ಉಡುಪಿ ಜಿಲ್ಲೆಯ ಉಳಿಯಾರುಗೋಳಿಯ ಅಬ್ದುಲ್ ಹಫೀಝ್ (55), ಮತ್ತು ಕಾಟಿಪಳ್ಳ ಕೃಷ್ಣಾಪುರದ ರಮ್ಲತ್ (46) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸ್ ತಂಡ ಕಾವೂರು ಕಾವೂರು ಕಟ್ಟೆ ಪರಿಸರದ ಬಾಡಿಗೆ ಮನೆಯೊಂದಕ್ಕೆ ಗುರುವಾರ ರಾತ್ರಿ ದಾಳಿ ನಡೆಸಿದೆ.

ಆರೋಪಿಗಳು ಬೆಂಗಳೂರು, ಮಂಗಳೂರು, ಮೈಸೂರು, ಉಡುಪಿ ಮತ್ತಿತರ ಕಡೆಗಳಿಂದ ಯುವತಿಯರು ಮತ್ತು ಮಹಿಳೆಯರನ್ನು ಮಾನವ ಕಳ್ಳಸಾಗಾಟ ಮೂಲಕ ಮಂಗಳೂರಿಗೆ ಕರೆಯಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಇಬ್ಬರು ದಲ್ಲಾಳಿಗಳನ್ನು ಬಂಧಿಸಿ 10,060 ರೂ. ನಗದು, 3 ಮೊಬೈಲ್ ಫೋನುಗಳು ಮತ್ತು ಕಾರು ಸಹಿತ 3,25,560 ರೂ. ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.