ಮಾಣಿ: ಕಾರು ಡಿಕ್ಕಿ ಹೊಡೆದು ಶಾಲಾ ಬಾಲಕ ಗಂಭೀರ!! ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ದಾಟುತ್ತಿದ್ದಾಗ ನಡೆದ ಘಟನೆ

ವಿಟ್ಲ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನೋರ್ವನಿಗೆ
ಕಾರೊಂದು ಡಿಕ್ಕಿ ಹೊಡೆದು ಬಾಲಕ ಗಂಭೀರ
ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ಮಾಣಿ ಎಂಬಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯ
ಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ, ಮಾಣಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳಲು ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದ್ದು, ಘಟನೆಯಿಂದ
ಗಾಯಗೊಂಡ ಬಾಲಕ ಕೊಡಾಜೆ ನಿವಾಸಿ ಮಾಣಿ ಕರ್ನಾಟಕ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಭರತ್ ಎಂದು ಗುರುತಿಸಲಾಗಿದೆ.

Leave A Reply

Your email address will not be published.