ಉಡುಪಿ:ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ-ಕೂರ್ಮಾರಾವ್ ಜಿಲ್ಲಾಧಿಕಾರಿ

ಉಡುಪಿ:ಕೊರೋನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಯಮವನ್ನು ಪಾಲಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಮನವಿ ಮಾಡಿದ್ದಾರೆ.

ಕೋವಿಡ್ ಪರೀಕ್ಷೆ ಕಡ್ಡಾಯದ ಜೊತೆಗೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ,ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಈ ಸೂಚನೆ
ಹೊರಡಿಸಲಾಗಿದೆ. ಹಾಗೇ ಜಿಲ್ಲೆಯಲ್ಲಿ ಮೊದಲ ಡೋಸ್ ಹಾಗೂ ಎರಡನೇ ಡೋಸ್ ಕಡ್ಡಾಯವಾಗಿ ಎಲ್ಲರೂ ಹಾಕಿಸಿಕೊಳ್ಳಬೇಕು ಎಂದರು. ಉಡುಪಿ ಕೋವಿಡ್ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

Leave A Reply

Your email address will not be published.