ಮಂಗಳೂರು:ಮತ್ತೊಮ್ಮೆ ನಗರದ ಕಾಲೇಜಿನಲ್ಲಿ ಗಾಂಜಾ ಘಾಟು!! ಗಾಂಜಾ ಸೇವಿಸಿ ರಾಗಿಂಗ್ ನಡೆಸಿದಲ್ಲದೆ ವಿದ್ಯಾರ್ಥಿಯ ತಲೆ ಬೋಳಿಸಿದ ಪ್ರಕರಣ

ಮಂಗಳೂರು:ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ನಡೆದ ರಾಗಿಂಗ್ ಪ್ರಕರಣದ ಒಂಭತ್ತು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರೆಲ್ಲರೂ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು,ಇವರ ಪೈಕಿ ಏಳು ಮಂದಿ ಗಾಂಜಾ ಸೇವನೆ ಮಾಡಿದ್ದರು ಎಂದು ತಿಳಿದುಬಂದಿದೆ.

ಘಟನೆ ವಿವರ:

ನಗರದ ಫಳ್ನಿರ್ ಬಳಿಯ ಕಾಲೇಜೊಂದರಲ್ಲಿ ಕೇರಳದ ಕಣ್ಣೂರು ಮೂಲದ ವಿದ್ಯಾರ್ಥಿಗಳು ಅಮಲ್ ಗಿರೀಶ್ ಮತ್ತು ಕಾರ್ತಿಕ್ ವಿಜಯನ್ ಎಂಬಿಬ್ಬರು ವಿದ್ಯಾರ್ಥಿಗಳನ್ನು ಬಲವಂತವಾಗಿ ಕೊಠಡಿಯೊಂದಕ್ಕೆ ಕರೆದೊಯ್ದು ಹಣ ನೀಡುವಂತೆ ಬೆದರಿಕೆ ಒಡ್ಡಿದಲ್ಲದೇ ಹೆಲ್ಮೆಟ್ ನಿಂದ ಹಲ್ಲೆ ನಡೆಸಿದ್ದಾರೆ. ಇಷ್ಟಕ್ಕೇ ಸುಮ್ಮನಾಗದ ಘಾತುಕರು ಗಡ್ಡ ಬೋಳಿಸಿ ವಿಕೃತಿ ಮೆರೆದಿದ್ದಾರೆ.

ಸದ್ಯ ಸಂತ್ರಸ್ತರು ನೀಡಿದ ದೂರಿನ ಆಧಾರದಲ್ಲಿ ಪಾಂಡೇಶ್ವರ ಠಾಣಾ ಪೊಲೀಸರು ಕೇರಳ ಮೂಲದ ವಿದ್ಯಾರ್ಥಿಗಳಾದ ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಎಂಬವರನ್ನು ರೈಲು ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಬಂಧಿತರಲ್ಲಿ ಏಳು ಮಂದಿ ಗಾಂಜಾ ಸೇವಿಸಿದ್ದು ದೃಢಪಟ್ಟಿದೆ.

ಪಾಂಡೇಶ್ವರ ಠಾಣಾ ಇನ್ಸ್ಪೆಕ್ಟರ್ ಲೋಕೇಶ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಂತೆ ಪಿಎಸ್ಐ ಶೀತಲ್ ಅಲಗೂರು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave A Reply

Your email address will not be published.