ಮನೆ ಮುಂದೆ ನಿಲ್ಲಿಸಿದ್ದ ಕಾರು ಒಮ್ಮೆಲೆ ಧಗಧಗನೆ ಉರಿಯಿತು!! | ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸುಟ್ಟು ಭಸ್ಮವಾದ ಮಹೀಂದ್ರ XUV500

Share the Article

ಬೆಂಗಳೂರು :ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ತಗುಲಿದ ಘಟನೆ ನಡೆದಿದ್ದು,ಯಾರೋ ಬೇಕಂತಲೇ ಮಾಡಿದ ಶಂಕೆ ವ್ಯಕ್ತವಾಗಿದೆ.

ನೆಲಮಂಗಲದ ಪೇಟೆ ಬೀದಿಯ ಹಿಪ್ಪೇ ಆಂಜನೇಯ ಬಡಾವಣೆಯ ನಂದೀಶ್ ಅವರಿಗೆ ಸೇರಿದ ಮಹೀಂದ್ರ ಎಕ್ಸ್ ಯುವಿ 500 ಕಾರಿಗೆ ಬೆಂಕಿ ತಗುಲಿದೆ.

ಈ ಘಟನೆಯ ಕುರಿತು ಅನುಮಾನ ವ್ಯಕ್ತ ವಾಗಿದ್ದು,ಯಾರೋ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಮಾಡಿದ್ದಾರೆ ಎಂಬುದು ತಿಳಿದಿದೆ.ಸದ್ಯ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ.ಘಟನೆಯ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Leave A Reply

Your email address will not be published.