1 ಕಿ.ಮೀ ದೂರ ಚಿರತೆಯನ್ನು ಅಟ್ಟಾಡಿಸಿಕೊಂಡು ಹೋಗಿ ತನ್ನ ಪುತ್ರನನ್ನು ರಕ್ಷಿಸಿದ ಜೀವಂತ ವಾಪಸ್ ತಂದ ತಾಯಿ, ಮಧ್ಯ ಪ್ರದೇಶ ಸಿಎಂ ಶ್ಲಾಘನೆ!
ಭೋಪಾಲ್: ತನ್ನ ಮಗನನ್ನು ಹೊತ್ತೊಯ್ದಿದ್ದ ಚಿರತೆಯನ್ನು ಬರೊಬ್ಬರಿ 1 ಕಿ.ಮೀ ಅಟ್ಟಾಡಿಸಿಕೊಂಡು ಹೋಗಿ ಅದರೊಂದಿಗೆ ಬಡಿದಾಡಿ ಮತ್ತೆ ತನ್ನ ಮಗುವನ್ನು ಜೀವಂತ ರಕ್ಷಿಸಿಕೊಂಡು ಬಂದಿರುವ ತಾಯಿಯೊಬ್ಬಳ ಕಥೆ ಇದು. ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ 500 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯ ಸಂಜಯ್ ಹುಲಿ ಸಂರಕ್ಷಿತ ಪ್ರದೇಶ ಇದೆ. ಅದರ ಸಮೀಪದಲ್ಲಿರುವ ಬಾಡಿ ಜರಿಯಾ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ತನ್ನ 8 ವರ್ಷದ ಮಗನನ್ನು ಹೊತ್ತೊಯ್ದಿದ್ದ ಚಿರತೆಯನ್ನು ಬೆನ್ನಟ್ಟಿ ಅದರೊಂದಿಗೆ ಕಾದಾಡಿ ಮಗನನ್ನು ರಕ್ಷಿಸಿಕೊಂಡು ಬಂದಿದ್ದಾರೆ. …