ಓಮಿಕ್ರಾನ್ ರೂಪಾಂತರಿ ವೈರಸ್ ನ ಮೊದಲ ರೋಗಿ ಕರ್ನಾಟಕದಿಂದ ಎಸ್ಕೇಪ್ ! ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ !
ಬೆಂಗಳೂರು: ಓಮಿಕ್ರಾನ್ ರೂಪಾಂತರಿ ತಗುಲಿರುವ ಮೊದಲ ರೋಗಿಯು ರಾಜ್ಯದಿಂದ ಪರಾರಿಯಾಗಿದ್ದಾನೆ ಎಂಬ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಹಾಗೆಂದು ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಹೇಳಿದೆ. ಭಾರತದಲ್ಲಿ ಒಮಿಕ್ರಾನ್ ರೂಪಾಂತರದ ಮೊದಲ ಪ್ರಕರಣಗಳ ಕುರಿತು ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದ್ದು, ಎರಡೂ ಪ್ರಕರಣಗಳು ಕರ್ನಾಟಕದಿಂದ ವರದಿಯಾಗಿದ್ದವು. ಅದರಲ್ಲಿ ಒಬ್ಬನಿಗೆ ಖಾಸಗಿ ಲ್ಯಾಬ್ನವರು ಕೊರೊನಾ ನೆಗೆಟಿವ್ ವರದಿಯನ್ನು ನೀಡಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ.ಮೊದಲ ರೋಗಿ 66 ವರ್ಷ ವಯಸ್ಸಿನವರಾಗಿದ್ದು, ನವೆಂಬರ್ 20 ರಂದು ದಕ್ಷಿಣ ಆಫ್ರಿಕಾದಿಂದ …