ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ | 9 ಮಂದಿ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಮಂಗಳೂರಿನ ಖಾಸಗಿ ಪದವಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 9 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಹಾಗೂ ಐದು ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹದ್, ಅಬುತಹರ್, ಮುಹಮ್ಮದ್ ನಾಸಿಫ್, ಆದರ್ಶ ಎಂದು ಗುರುತಿಸಲಾಗಿದೆ. ಒಟ್ಟು 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

3ನೇ ವರ್ಷದ ಬಿಎಸ್ಸಿ ಹಾಸ್ಪಿಟಾಲಿಟಿ ಸೈನ್ ಕಲಿಯುತ್ತಿರುವ ಕೇರಳ ಮೂಲದ ಆದರ್ಶ ಪ್ರೇಮಕುಮಾರ್ ಮೊನ್ನೆ ಸಂಜೆ ಸುಮಾರು 7 ಗಂಟೆಗೆ ತನ್ನ ಸ್ನೇಹಿತ ಅಭಿರಾಮ್‌ನನ್ನು ಭೇಟಿ ಮಾಡಿ ಮಾತನಾಡಿಸುವಾಗ ಸಿನಾನ್ ಹಾಗೂ ಇತರ 8 ಜನ ಇಂಟರ್ ಲಾಕ್ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಆದರ್ಶ ಹಾಗು ಮೊಹಮ್ಮದ್ ನಸಿಪ್ ಗೆ ಗಾಯವಾಗಿದೆ.

ಗಲಾಟೆ ಬಿಡಿಸಲು ಬಂದಿದ್ದ ಆದರ್ಶ ಅವರ ಸ್ನೇಹಿತರಾದ ಅದೇ ಹಾಸ್ಟೇಲ್ ನ ಶನಿನ್ ಮತ್ತು ಶ್ರವಣ ಅವರಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ಆದರ್ಶ ದೂರು ನೀಡಿದ್ದಾರೆ.

ಗಲಾಟೆ ಬಿಡಿಸಲು ಬಂದಿದ್ದ ತನ್ನ ಸ್ನೇಹಿತರಾದ ಶನಿನ್ ಮತ್ತು ಶ್ರವಣ್ ಅವರು ಗುಜ್ಜರಕರೆ ಬಳಿ ಹಾಸ್ಟೆಲ್ ನಲ್ಲಿ ವಾಸ್ತವ ಇದ್ದು ಅವರು ಅಪಾಯದಲ್ಲಿದ್ದು ರಕ್ಷಣೆ ಮಾಡಲು ಕೋರಿಕೊಂಡಿದ್ದರು. ಅದರಂತೆ ರಾತ್ರಿ 10 ಗಂಟೆ ಸುಮಾರಿಗೆ ಪಿಎಸ್‌ಐ ಶೀತಲ್ ಹಾಗೂ ಸಿಬ್ಬಂದಿ ಹಾಸ್ಟೆಲ್ ಬಳಿ ಹೋದಾಗ ಹಾಸ್ಟೆಲ್ ನ ನಿವಾಸಿ ವಿದ್ಯಾರ್ಥಿಗಳು ಇಂಟರ್ ಲಾಕ್, ಕಲ್ಲು ಹಾಗೂ ಕುರ್ಚಿಗಳನ್ನು ಎಸೆದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಸಕ್ತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಆಯುಕ್ತ ಎನ್ . ಶಶಿಕುಮಾರ್ ತಿಳಿಸಿದ್ದಾರೆ.

Leave A Reply

Your email address will not be published.