ಸವಣೂರಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ

ಸವಣೂರು: ಯುವಜನೋತ್ಸವವು ಜನಪದೀಯ ಸಾಂಸ್ಕೃತಿಕ ಲೋಕದ ಅನಾವರಣದ ಜತೆಗೆ ಸುಪ್ತವಾದ ಪ್ರತಿಭೆ ಅನಾವರಣಕ್ಕೂ ಉತ್ತಮ ವೇದಿಕೆಯಾಗಿದೆ. ಪ್ರತಿಭೆಗಳನ್ನು ಗುರುತಿಸಲು ವೇದಿಕೆ ಅವಶ್ಯಕ. ಯುವಜನೋತ್ಸವ ಕಾರ್ಯಕ್ರಮದ ಮೂಲಕ ಪ್ರತಿಭೆಗಳನ್ನು ಬೆಳಕಿಗೆ ತರುವ ಕಾರ್ಯ ಆಗುತ್ತಿರುವುದು ಶ್ಲಾಘನೀಯ ಎಂದು ಪುತ್ತೂರು ಸಹಾಯಕ ಆಯುಕ್ತರಾದ ಡಾ| ಯತೀಶ್ ಉಳ್ಳಾಲ್ ಹೇಳಿದರು.

ಅವರು ಜಿಲ್ಲಾಡಳಿತ ದ.ಕ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದ.ಕ ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ ಕಡಬ, ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು ಇವರ ಸಹಯೋಗದೊಂದಿಗೆ ಡಿ 4.ರಂದು ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಭೆಗಳಿಗೆ ವೇದಿಕೆ ಒದಗಿಸಿಕೊಟ್ಟು ಆರೋಗ್ಯಕರ ಸ್ಪರ್ಧೆಯ ಮೂಲಕ ಗುರುತಿಸುವ ಕೆಲಸ ಯುವಜನೋತ್ಸವದಲ್ಲಿ ಆಗುತ್ತಿದೆ. ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಾ ಪ್ರತಿಭೆಗಳಿಗೆ ವೇದಿಕೆಯನ್ನು ಒದಗಿಸುವ ಕೆಲಸ ಗ್ರಾಮೀಣ ಭಾಗದ ಯುವಕ,ಯುವತಿ ಮಂಡಲ, ಸಮಾಜ ಸೇವಾ ಸಂಘಟನೆಗಳಿಂದ ಆಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಡಿದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ.ಸೀತಾರಾಮ ರೈ ಮಾತನಾಡಿ, ಪ್ರತಿಭೆ ಯುವಜನರ ಸೊತ್ತು. ಪ್ರತಿಭೆಗೆ ಸಿಕ್ಕಿದ ಅವಕಾಶಗಳನ್ನು ಬಳಸಿಕೊಳ್ಳುವಂತಹ ವ್ಯವಸ್ಥೆ ಯುವಜನತೆ ಮಾಡಬೇಕು. ಪ್ರತಿಭೆಗಳಿಗೆ ವೇದಿಕೆಯನ್ನು ಒದಗಿಸುವುದರ ಮೂಲಕ ಇವತ್ತು ಗ್ರಾಮೀಣ ಪ್ರದೇಶದಲ್ಲಿಯೂ ನಮ್ಮ ಸಾಂಪ್ರಾದಯಕ ಕಲೆಗಳು ಉಳಿಯಲು ಸಾಧ್ಯವಾಗಿದೆ. ಯುವಜನತೆ ವಿದೇಶಿಯ ಸಂಸ್ಕೃತಿಯನ್ನು ಪ್ರೀತಿಸುವ ಇಂದಿನ ಸನ್ನಿವೇಶದಲ್ಲಿ ವಿದೇಶಿಯರೇ ಭಾರತ ದೇಶದ ಸಂಸ್ಕೃತಿಗೆ ಆಕರ್ಷಿತರಾಗುತ್ತಿದ್ದಾರೆ ಎಂದಾದರೆ ನಮ್ಮ ದೇಶದ ಸಂಸ್ಕೃತಿ, ಸಮಾಜದ ಬಗ್ಗೆ ಜನಗಳಿಗೆ ಗೌರವ ಎಷ್ಠಿದೆ ಎಂಬುದನ್ನು ಯುವಜನತೆ ಅರ್ಥಮಾಡಿಕೊಳ್ಳಬೇಕಾಗುತ್ತದೆ ಎಂದವರು ಯುವ ಶಕ್ತಿಯೇ ದೇಶದ ಸಂಪತ್ತು. ಆ ಯುವ ಶಕ್ತಿಯ ಸದ್ಬಳಕೆವಾದಾಗ ನಮ್ಮ ದೇಶದ ಸಂಸ್ಕೃತಿಯ ಜೊತೆಗೆ ಸಂಪತ್ತನ್ನು ಉಳಿಸಲು ಸಾಧ್ಯ. ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್. ಸಿ ಶುಭಹಾರೈಸಿದರು.
ರಾಷ್ಟ್ರೀಯ ಕಬಡ್ಡಿ ತರಬೇತುದಾರರು, ನಿವೃತ್ತ ಸೈನಿಕರಾದ ಮಾಧವ ಬಿ.ಕೆ, ಪುತ್ತೂರು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್, ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ, ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರಾಜಲಕ್ಷ್ಮೀ ಎಸ್ ರೈ, ಸವಣೂರು ಯುವಕ ಮಂಡಲದ ಅಧ್ಯಕ್ಷ ಪ್ರಕಾಶ್ ಮಾಲೆತ್ತಾರು ಉಪಸ್ಥಿತರಿದ್ದರು. ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾದ್ಯಾಪಕಿ ಪ್ರತಿಭಾ ಸನ್ಮಾನಿತರ ಪರಿಚಯ ವಾಚಿಸಿದರು.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ ಪ್ರಸ್ತಾವಿಕದೊಂದಿಗೆ ಸ್ವಾಗತಿಸಿದರು. ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ವಂದಿಸಿ, ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ: ಝಿ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಅಖಿಲಾ ಪಜಿಮಣ್ಣು, ಮಂಗಳೂರು ಯುವ ಸ್ಪಂದನ ಕೇಂದ್ರದ ಯುವ ಸಮಾಲೋಚನಾಧಿಕಾರಿ ಆದರ್ಶ್ ಶೆಟ್ಟಿ ಮತ್ತು ಸಂಪ್ಯ ಪೋಲಿಸ್ ಠಾಣೆಯ ಮುಖ್ಯಮಂತ್ರಿಗಳ ಚಿನ್ನದ ಪದಕ ವಿಜೇತ ಪ್ರವೀಣ್ ರೈ ನಡುಕೂಟೇಲು ಇವರನ್ನು ಕಾರ್ಯಕ್ರಮದಲ್ಲಿ ಸಮ್ಮಾನಿಸಲಾಯಿತು

Leave A Reply

Your email address will not be published.