ಮಂಗಳೂರು: ಶಾಲಾ ವಾಹನ ಚಾಲಕನಿಂದ ಆರನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ. ವಾಹನ ಚಾಲಕನ ಬಂಧನ.

Share the Article

ಮಂಗಳೂರು: ಶಾಲಾ ವಾಹನ ಚಾಲಕನಿಂದ ಆರನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ. ವಾಹನ ಚಾಲಕನ ಬಂಧನ.

ಮಂಗಳೂರು ನಗರದ ಶಾಲೆಯೊಂದರ ಲ್ಲಿ ಆರನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಗೆ ಶಾಲಾ ವಾಹನದ ಚಾಲಕನೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯು ಮನೆಯಿಂದ ದಿನ ಶಾಲಾ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದಳು. ಈ ಸಂದರ್ಭದಲ್ಲಿ ಬಾಲಕಿಗೆ ವಾಹನದ ಚಾಲಕ ಲೈಂಗಿಕ ಕಿರುಕಳ ನೀಡಿದ್ದಾನೆ. ಈ ವಿಷಯವನ್ನು ಬಾಲಕಿ ತನ್ನ ಪೋಷಕರೊಂದಿಗೆ ಹೇಳಿಕೊಂಡಿದ್ದಾಳೆ. ವಿದ್ಯಾರ್ಥಿನಿಯ ಪೋಷಕರು ಆತನ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಪೋಕ್ಸೋ ಪ್ರಕರಣ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ವಿಷಯದ ಬಗ್ಗೆ ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನವಾಗಿದೆ.

Leave A Reply