Breaking news
ವಿಧಾನ ಪರಿಷತ್ ಚುನಾವಣಾ ಹಿನ್ನೆಲೆ!!ರಾಜ್ಯ ಭೂ ಮಾಪನ ಇಲಾಖೆಯಲ್ಲಿ ಸರ್ವೆಯರ್ ಹುದ್ದೆಗಳ ಭರ್ತಿಗೆ ಹೊರಡಿಸಿದ್ದ ಆದೇಶ ಹಿಂಪಡೆದ ಸರ್ಕಾರ!!

ರಾಜ್ಯ ಕಂದಾಯ ಮತ್ತು ಭೂ ಮಾಪನ ಇಲಾಖೆಯಯಲ್ಲಿ ಖಾಲಿ ಇದ್ದ ಸರ್ವೆಯರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದ್ದ ಅರ್ಜಿಯ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂದು ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

 

ಒಟ್ಟು ಮೂರು ಸಾವಿರ ಸರ್ವೆಯರ್ ಖಾಲಿ ಹುದ್ದೆಗಳಿಗೆ ಡಿಸೆಂಬರ್ 31 ರ ಒಳಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಈ ಮೊದಲು ಆದೇಶ ಹೊರಡಿಸಲಾಗಿತ್ತು. ಸದ್ಯ ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಆದೇಶವನ್ನು ಹಿಂಪಡೆಯಲಾಗಿದೆ. ರಾಜ್ಯ ಭೂ ಮಾಪನ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಅರ್ಜಿ ಸಲ್ಲಿಸಲು ಮುಂದಿನ ದಿನಾಂಕವನ್ನು ಎಲೆಕ್ಷನ್ ಮುಗಿದ ಬಳಿಕ ನಿರ್ಧಾರಿಸಲಾಗುವುದು ಎಂದು ತಿಳಿಸಿದ್ದಾರೆ.

Leave A Reply

Your email address will not be published.