ಮಂಗಳೂರಿನಲ್ಲಿ ಮತ್ತೊಮ್ಮೆ ಕೊರೋನಾ ಸ್ಫೋಟ | ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಪಾಸಿಟಿವ್!!

ಮಂಗಳೂರಿನಲ್ಲಿ ಮತ್ತೊಮ್ಮೆ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಒಂದೇ ದಿನ ಕೊರೋನಾ ದೃಢಪಟ್ಟಿದೆ.

ಮಂಗಳೂರಿನ ಎಂ.ವಿ. ಶೆಟ್ಟಿ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸದ್ಯ ಕಾಲೇಜನ್ನು ಆರೋಗ್ಯ ಇಲಾಖೆ ಕಂಟೇನ್ಮೆಂಟ್ ಮಾಡಿದೆ. 10 ದಿನದಲ್ಲಿ 21 ಜನ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಆಗಿದೆ.

ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ಬಂದ ಎಲ್ಲಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ಟೆಸ್ಟ್ ಮಾಡಿಸಲಾಗಿದೆ. ಈವರೆಗೆ ಮೂರೂ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 23 ಕೇರಳದ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಇದೆ.

Leave A Reply

Your email address will not be published.