ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳೇ ಗಮನಿಸಿ !! | 2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ

ಕೊರೋನಾ ಮೂರನೇ ಅಲೆಯ ಆತಂಕದ ನಡುವೆಯೇ ಶೈಕ್ಷಣಿಕ ಚಟುವಟಿಕೆ ತನ್ನ ವೇಗ ಕಂಡುಕೊಂಡಿದೆ. 2021 -22 ನೇ ಸಾಲಿನ ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆ ಮಾರ್ಗಸೂಚಿಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಬಿಡುಗಡೆ ಮಾಡಿದೆ.

ಈ ಕುರಿತು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಆದೇಶ ಹೊರಡಿಸಿದ್ದು, ಎಸ್ಎಸ್ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಯನ್ನು ನಡೆಸಲು ಆದೇಶಿಸಿದ್ದು, ಪರೀಕ್ಷೆಯ ಮಾರ್ಗಸೂಚಿಯನ್ನು ಮಂಡಳಿಯ ಜಾಲತಾಣದಲ್ಲಿ ಅಪ್ ಲೋಡ್ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

2022 ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ನಡೆಯಲಿರುವ ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲಾ/ಕಾಲೇಜುಗಳಿಂದ ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೊಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ. ಮುಂದುವರೆದು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಮಾಹಿತಿಯನ್ನು ಮಂಡಳಿಯ https:sslc.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಅಪ್ ಲೋಡ್ ಮಾಡಲು ಸೂಚಿಸಿದೆ.

ಮಂಡಳಿಯ ಮಾರ್ಗಸೂಚಿಯಲ್ಲಿ ಮಾನದಂಡ, ಅಂಕಗಳು ಮತ್ತು ಶ್ರೇಣಿಗಳ ವಿವರ, ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಮುದ್ರಣೆ ಕುರಿತು ಮಾಹಿತಿ ನೀಡಲಾಗಿದೆ. ಮುಂದುವರೆದು, ಶಾಲಾ ಮುಖ್ಯೋಪಾಧ್ಯಾಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುತ್ತೋಲೆಯಲ್ಲಿ ವಿವರವಾದ ಮಾಹಿತಿ ನೀಡಲಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರುಗಳಿಗೆ ನಿರ್ದೇಶನ ನೀಡಲಾಗಿದೆ.

ಪರೀಕ್ಷೆಯ ಮಾರ್ಗಸೂಚಿಯನ್ನು ಮಂಡಳಿಯ ಜಾಲತಾಣದಲ್ಲಿ ಅಪ್ ಲೋಡ್ ಮಾಡಲಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಮಂಡಳಿಯ ವೆಬ್ ಸೈಟ್ ವೀಕ್ಷಿಸಬಹುದಾಗಿದೆ.

Leave A Reply

Your email address will not be published.