ರಾಜ್ಯದ ಜನತೆಗೆ ಕಾದಿದೆ ‘ಕರೆಂಟ್’ ಶಾಕ್ | ಬೇಸಿಗೆಯ ಮುನ್ನವೇ ಏರಿಕೆಯಾಗಲಿದೆಯಂತೆ ವಿದ್ಯುತ್ ಬೆಲೆ !!
ಬೆಂಗಳೂರು:ದಿನದಿಂದ ದಿನಕ್ಕೆ ದಿನಸಿ ಸಾಮಗ್ರಿಯಿಂದ ಹಿಡಿದು ತರಕಾರಿ, ಗ್ಯಾಸ್ ಇಂಧನಗಳ ಬೆಲೆ ಏರಿಕೆ ಆಗುತ್ತಲೇ ಇದ್ದು, ಜನ ಸಾಮಾನ್ಯರಿಗೆ ದೊಡ್ಡ ಹೊರೆಯಾಗಿದೆ. ಇದೀಗ ಗ್ರಾಹಕರಿಗೆ ಮತ್ತೊಂದು ದರ ಏರಿಕೆಯ ಪೆಟ್ಟು ಬೀಳಲಿದ್ದು,ಬೇಸಿಗೆಗೂ ಮೊದಲೇ ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಈ ಸಂಬಂಧ ಬೆಸ್ಕಾಂ ಅಧಿಕಾರಿಗಳು ಸಲ್ಲಿರುವ ಪ್ರಸ್ತಾವಣೆಯ ಪ್ರಕಾರ ಶೀಘ್ರದಲ್ಲಿಯೇ ವಿದ್ಯುತ್ ದರ ಕೂಡ ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ. ವಿದ್ಯುತ್ ಸರಬರಾಜು ಕಂಪೆನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರ ಕಂಪೆನಿಗಳು ಈ ವರ್ಷವೂ ವಿದ್ಯುತ್ ದರ ಏರಿಕೆಯ ಪ್ರಸ್ತಾವಣೆ ಸಲ್ಲಿಸಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಕಂಪೆನಿಗಳು ಪ್ರಸ್ತಾವನೆ ಸಲ್ಲಿಸಿದ್ದು, ನಷ್ಟದ ಕಾರಣ ನೀಡಿ ಕಂಪೆನಿಗಳು ಬೆಲೆ ಏರಿಕೆಯನ್ನು ಪ್ರಸ್ತಾಪಿಸಿವೆ. ಈ ಹಿಂದಿನ ವರ್ಷಗಳಲ್ಲಿ ಕೂಡ ವಿದ್ಯುತ್ ಬೆಲೆ ಏರಿಕೆಯಾಗಿತ್ತು.ಈ ಬಾರಿ ಯುನಿಟ್ ಗೆ 1 ರೂ. 50 ಪೈಸೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
2009 ರಲ್ಲಿ ಪ್ರತಿ ಯೂನಿಟ್ ಗೆ 34 ಪೈಸೆ ಹೆಚ್ಚಳವಾಗಿತ್ತು. 2010 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳ, 2011 ರಲ್ಲಿ ಪ್ರತಿ ಯೂನಿಟ್ ಗೆ 28 ಪೈಸೆ ಹೆಚ್ಚಳ, 2012 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ ಹೆಚ್ಚಳ, 2013 ರಲ್ಲಿ ಪ್ರತಿ ಯೂನಿಟ್ 13 ಪೈಸೆ ಹೆಚ್ಚಳ, 2017 ರಲ್ಲಿ ಪ್ರತಿ ಯೂನಿಟ್ 48 ಪೈಸೆ ಹೆಚ್ಚಳ, 2019 ರಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ, 2020 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳವಾಗಿತ್ತು.