ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ನಟ ಸುದೀಪ್ ಭೇಟಿ

Share the Article

ಕಡಬ : ಕನ್ನಡ ಚಿತ್ರನಟ ಕಿಚ್ಚ ಸುದೀಪ್ ಇತಿಹಾಸ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.

ಕುಟುಂಬ ಸಮೇತರಾಗಿ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಸುದೀಪ್, ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದಲ್ಲಿ ವಿದ್ಯಾಪ್ರಸನ್ನ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಮಠದಲ್ಲಿ ಆಶ್ಲೇಷ,ನಾಗಪ್ರತಿಷ್ಠೆ ಪೂಜೆ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದರ್ಶನ ಪಡೆದರು. ಪತ್ನಿ ಪ್ರಿಯಾ ಹಾಗೂ ಮಕ್ಕಳು ಜೊತೆಗಿದ್ದರು.

ನಿನ್ನೆ ಉಡುಪಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದು ಸುದೀಪ್ ಕಾರ್ಕಳ ತಾಲೂಕಿನ ಬೆಳಣ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದು, ದೇವಸ್ಥಾನದಲ್ಲಿ ದೇವಿಯ ಸನ್ನಿಧಿಯಲ್ಲಿ ನಡೆದ ಕುಟುಂಬದ ಹರಕೆಯ ಚಂಡಿಕಾ ಯಾಗದಲ್ಲಿ ಪಾಲ್ಗೊಂಡಿದ್ದರು.

Leave A Reply