ಅಡೆಂಜ; ಬ್ರಹ್ಮಕಲಶೋತ್ಸವ ಪೂರ್ವ ತಯಾರಿ ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಭಾಗಿ

ಕಡಬ : ಒಂದು ಪುಣ್ಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಮಗೆ ದೊರಕುವ ಸೌಭಾಗ್ಯ. ಜತೆಗೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರೀ ದೇವರ ಕೆಲಸ ಕಾರ್ಯಕ್ರಮಗಳಿಗೆ ಭಕ್ತರಾದ ನಾವು ಸಮಯ, ಶ್ರಮದ ಜತೆ ಪೂರ್ಣ ಸಹಕಾರ ನೀಡಿ ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸೋಣ. ದೇವರ ಕಾರ್ಯದಲ್ಲಿ ಕೆಲಸ ಮಾಡಿದ ಪುಣ್ಯ ನಮಗೆ ಸಿಗಲಿದೆ ಎಂದು ಬೆಳ್ತಂಗಡಿ ಶಾಸಕ, ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರ ಹರೀಶ್ ಪೂಂಜ ಹೇಳಿದರು.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವ ತಯಾರಿ ಮತ್ತು ಮಾಹಿತಿ ನೀಡುವ ಕಾರ್ಯಕ್ರದಲ್ಲಿ ಅವರು ಶುಕ್ರವಾರ ಮಾತನಾಡಿದರು. ಬ್ರಹ್ಮಕಲಶೋತ್ಸವ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ತಮ್ಮ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದಲ್ಲಿ ಇಡೀ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಜತೆಗೆ ನಾವು ಮಾಡಿದಕ್ಕೆ ಸಾರ್ಥಕತೆ ಸಿಗಲಿದೆ ಎಂದರು.

ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ, ಗುಡ್ರಾದಿ ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನದ ಅಧ್ಯಕ್ಷ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಮಂಜುನಾಥ ಗೌಡ ಕೈಕುರೆ, ಬ್ರಹ್ಮಕಲಶೋತ್ಸವ ಸಮಿತಿಯ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಸ್.ಎಚ್. ವೆಂಕಟ್ರಮಣ ಗೌಡ ಸಾಂತ್ಯಡ್ಕ, ಕರ‍್ಯದರ್ಶಿ ಎಸ್.ರಾಧಕೃಷ್ಣ ಅಡೆಂಜ-ಸಾಂತ್ಯಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಿಟ್ಟು ಕಲ್ಲುಗುಡ್ಡೆ ಸ್ವಾಗತಿಸಿ, ವಂದಿಸಿದರು. ಶಿಕ್ಷಕ ಶ್ರೀಧರ ಗೌಡ ಕಾರ್ಯಕ್ರಮ ನಿರೂಪಿಸಿದರು. ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ, ಭಜನಾ ಮಂಡಳಿ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು, ಊರ ಭಕ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಫೆ.9ರಿಂದ 14ಬ್ರಹ್ಮಕಲಶೋತ್ಸವ;

ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 2022ರ ಫೆ.9ರಿಂದ 14ರ ವರೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರ ಕೃಪಾಶೀರ್ವಾದದೊಂದಿಗೆ, ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಗಳ ಗೌರವ ಅಧ್ಯಕ್ಷತೆಯಲ್ಲಿ, ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಜರುಗಲಿದೆ.

Leave A Reply

Your email address will not be published.