ಬೆಳ್ತಂಗಡಿ | ಕಾಲೇಜು ವಿದ್ಯಾರ್ಥಿನಿ ಪೇಟೆಗೆ ಹೋಗಿ ಬರ್ತೇನೆ ಎಂದು ಹೇಳಿ ಹೋದವಳು ನಾಪತ್ತೆ, ದೂರು ದಾಖಲು

ಪೇಟೆಗೆ ಹೋಗಿ ಬರುತ್ತೇನೆಂದು ಮನೆಯಿಂದ ಹೊರಟ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ನಗರದ 17 ವರ್ಷ ವಯಸ್ಸಿನ ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನಿನ್ನೆ ಕಾಲೇಜಿಗೆ ರಜೆ ಇದ್ದುದರಿಂದ ಬೆಳಿಗ್ಗೆ 9 ಗಂಟೆ ಸುಮಾರಿಗೆ ಪೇಟೆಗೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವಳು ಇತ್ತ ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾಳೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕಾಣೆಯಾದ ವಿದ್ಯಾರ್ಥಿನಿಯ ತಂದೆ ದೂರು ನೀಡಿದ್ದಾರೆ.

Leave A Reply

Your email address will not be published.