ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬರೋಬ್ಬರಿ 15,000 ಶಿಕ್ಷಕರ ನೇಮಕಾತಿಗೆ ನಿರ್ಧಾರ | ಇಂಜಿನಿಯರಿಂಗ್ ಪದವೀಧರರಿಗೂ ಅವಕಾಶ

ರಾಜ್ಯದಲ್ಲಿ ಶಿಕ್ಷಕರ ಕೊರತೆ ಇರುವುದು ಹಲವು ವರ್ಷಗಳಿಂದ ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ ಈ ಬಾರಿ ರಾಜ್ಯ ಸರ್ಕಾರ ಶಿಕ್ಷಕರು ಹಾಗೂ ಉಪನ್ಯಾಸಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ತ್ವರಿತ ಕ್ರಮ ಕೈಗೊಂಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,000 ಶಿಕ್ಷಕರ ನೇಮಕಾತಿಗೆ ನಿರ್ಧರಿಸಿದೆ.

ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ 10,000 ಹಾಗೂ ಕರ್ನಾಟಕದ 5,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಕ್ರಮಕೈಗೊಳ್ಳಲಾಗಿದೆ. ಹಣಕಾಸು ಇಲಾಖೆ ಅನುಮತಿ ನೀಡಿದ್ದು, ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ 4000 ಅತಿಥಿ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ.

ಈ ಬಾರಿ ಇಂಜಿನಿಯರಿಂಗ್ ಪದವೀಧರರಿಗೆ ಕೂಡ ಶಿಕ್ಷಕರ ನೇಮಕಾತಿಗೆ ಪರಿಗಣಿಸಲಾಗುವುದು. ಪದವೀಧರರು, ಬಿಎಡ್, ಟಿಇಟಿ ಪಾಸಾದ ಅಭ್ಯರ್ಥಿಗಳ ಜೊತೆಗೆ ಇಂಜಿನಿಯರಿಂಗ್ ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.

ಇಂಗ್ಲೀಷ್, ಪರಿಸರ ಅಧ್ಯಯನ, ವಿಜ್ಞಾನ, ಗಣಿತ ಇತರೆ ವಿಷಯಗಳ ಶಿಕ್ಷಕರ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವೀಧರರಿಗೆ ಅವಕಾಶ ಕಲ್ಪಿಸಲಾಗುವುದು ಎನ್ನಲಾಗಿದೆ.

Leave A Reply

Your email address will not be published.