ಬೆಳ್ತಂಗಡಿ : ನಾಲ್ಕನೇ ತರಗತಿಯ ಬಾಲಕಿಯ ಅತ್ಯಾಚಾರ,ಅರೋಪಿ ವಶಕ್ಕೆ

ಬೆಳ್ತಂಗಡಿ: ನಾಲ್ಕನೇ ತರಗತಿಯ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

ಆರೋಪಿ ಜಯಾನಂದ ಬಾಲಕಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದೊಯ್ದು ಬೆದರಿಸಿ ಅತ್ಯಾಚಾರವೆಸಗಿದ್ದು, ಬಾಲಕಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕಿ ಈ ವಿಚಾರವನ್ನು ಮನೆಯವರಿಗೆ ತಿಳಿಸಿದ್ದು, ಕೂಡಲೇ ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಜಯಾನಂದ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

Leave A Reply

Your email address will not be published.