ಬೆಳ್ತಂಗಡಿ: ಶಿಶಿಲ ಗ್ರಾಮದ ಎಸ್ಎಸ್ಎಲ್ ಸಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

Share the Article

ಬೆಳ್ತಂಗಡಿ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.

ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಲಕ್ಷ್ಮೀಶ(16.ವ) ಮೃತರು.ಇವರು ಲಿಂಗಪ್ಪ ಗೌಡ ಎಂಬುವವರ ಪುತ್ರನಾಗಿದ್ದು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಡಿ.12 ರಂದು ಭಾನುವಾರ ರಜಾದಿನವಾದ ಕಾರಣ ವಿದ್ಯಾರ್ಥಿ ಮನೆಯಲ್ಲಿಯೇ ಇದ್ದು,ಕೆಲಸಕ್ಕೆಂದು ಹೋಗಿದ್ದ ಈತನ ತಾಯಿ ಮಧ್ಯಾಹ್ನ ಮನೆಗೆ ಬಂದು ಬಳಿಕ ಮತ್ತೆ ಕೆಲಸದ ಸ್ಥಳಕ್ಕೆ ತೆರಳಿದ್ದರು. ಸಂಜೆ ಮನೆಗೆ ಬಂದು ನೋಡಿದ ವೇಳೆ ಬಾಲಕ ಮನೆಯ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕೃತ್ಯ ಬೆಳಕಿಗೆ ಬಂದಿದೆ.

ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕಾಗಿ ವಿದ್ಯಾರ್ಥಿ ಈ ಕೃತ್ಯವೆಸಗಿದ್ದಾನೆ ಎಂಬುವುದು ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆ.

Leave A Reply