ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Share the Article

ಸವಣೂರು : ತನ್ನ ವಿಶೇಷ ಸಾಧನೆಗಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿಯನ್ನು ಪಡೆದುಕೊಂಡಿತು.

ಡಿ.14ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ಪ್ರದಾನ ಮಾಡಿದರು.

ಸವಣೂರು ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ ಅವರು ಪ್ರಶಸ್ತಿ ಸ್ವೀಕರಿಸಿದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರುಗಳಾದ ಎಸ್‌.ಬಿ ಜಯರಾಮ ರೈ, ಶಶಿಕುಮಾರ್ ರೈ ಬಾಲ್ಯೊಟ್ಟು, ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಉಪಸ್ಥಿತರಿದ್ದರು.

Leave A Reply