ಉಪ್ಪಿನಂಗಡಿ : ಸೆಕ್ಷನ್ 144 ಜಾರಿ, ಠಾಣೆಗೆ ಮುತ್ತಿಗೆ ಯತ್ನ, ಲಾಠಿ ಚಾರ್ಜ್

ಉಪ್ಪಿನಂಗಡಿ: ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವ ಮೂವರು ಪಿಎಫ್‌ಐ ಮುಖಂಡರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಮತ್ತೆ ಠಾಣೆಗೆ ಮುತ್ತಿಗೆಯತ್ನ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ದ.14ರಂದು ರಾತ್ರಿ ನಡೆದಿದೆ.

ಈ ಮಧ್ಯೆ, ಉಪ್ಪಿನಂಗಡಿಯಲ್ಲಿ ಈ ದಿನ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪೊಲೀಸರ ವಶದಲ್ಲಿರುವ ಪಿಎಫ್‌ಐ ಮುಖಂಡರ ಪೈಕಿ ಓರ್ವನನ್ನು ಮಾತುಕತೆ ಬಳಿಕ ಪೊಲೀಸರು ಬಿಡುಗಡೆಗೊಳಿಸಿದ್ದರೂ ಉಳಿದಿಬ್ಬರನ್ನೂ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ರಾತ್ರಿ ವೇಳೆ ಕಾರ್ಯಕರ್ತರು ಮತ್ತೆ ಠಾಣೆಗೆ ಮುತ್ತಿಗೆ ಹಾಕಲು ಯತ್ನ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಇಲ್ಲಿನ ಹಳೆಗೇಟು ಬಳಿ ನಡೆದಿದ್ದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಿಎಫ್‌ಐ ಮುಖಂಡರನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.ಅವರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ಬೆಳಿಗ್ಗಿನಿಂದಲೇ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು.ಈ ಸಂಬಂಧ ಪೊಲೀಸರೊಂದಿಗೆ ನಡೆದ ಮಾತುಕತೆ ಬಳಿಕ ಓರ್ವನ ಬಿಡುಗಡೆಗೊಳಿಸಲಾಗಿತ್ತು.ಆದರೆ ಉಳಿದ ಇಬ್ಬರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದರು.

Leave A Reply

Your email address will not be published.