ಬೆಳ್ತಂಗಡಿ: ವಿಕಲಚೇತನ ದಲಿತ ಯುವಕನ ಮೇಲೆ ಪೊಲೀಸರಿಂದ ಹಲ್ಲೆ | ಈ ಕೃತ್ಯದ ವಿರುದ್ಧ ಪೊಲೀಸ್ ಠಾಣೆ ಚಲೋ ಎಚ್ಚರಿಕೆ

ವಿಕಲಚೇತನ ದಲಿತ ಯುವಕನ ಮೇಲೆ ತುರ್ತು ಪೊಲೀಸ್ ವಾಹನದ ಸಿಬ್ಬಂದಿಗಳು ಏಕಾಏಕಿ ಹಲ್ಲೆ ನಡೆಸಿದ್ದನ್ನು ನಲಿಕೆ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಸಮಿತಿ ಖಂಡಿಸಿದೆ.

ಪೊಲೀಸರು ಶಿಶಿಲ ಗ್ರಾಮದ ಗಿರೀಶ್ ಎಂಬಾತನ ಮೇಲೆ ದೌರ್ಜನ್ಯ ಮಾಡಿದ್ದಾರೆ. ಇದು ತಪ್ಪು ಎಂದು ಸಂಘದ ಅಧ್ಯಕ್ಷ ಪ್ರಭಾಕರ ಎಸ್ ಶಾಂತಿಕೋಡಿ ಆರೋಪಿಸಿದ್ದಾರೆ.

ಜಮೀನಿನ ವ್ಯಾಜ್ಯಕ್ಕೆ ಕುರಿತು ಪೊಲೀಸ್ ಹಿಂಸೆ ಅನಾಗರಿಕತೆಯ ಸಂಕೇತ. ಒಬ್ಬ ವಿಕಲಚೇತನ ದಲಿತ ಯುವಕನ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವೇ ಇಲ್ಲ. ಆರೋಪಿತ ಪೊಲೀಸರ ಮೇಲೆ ಕ್ರಿಮಿನಲ್ ಕೇಸ್ ಹಾಕಿ, ಕೂಡಲೇ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು, ಇಲ್ಲವಾದಲ್ಲಿ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆ ಚಲೋ ಎಂಬ ಉಗ್ರ ರೀತಿಯ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರ ನೀಡಿದ್ದಾರೆ.

ದಸಂಸ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್, ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಶಾಂತಿಗೋಡು, ಮೈಸೂರು ವಿಭಾಗ ಸಂಘಟನಾ ಸಂಚಾಲಕ ಬಿ.ಕೆ ವಸಂತ್ರಮಾಜಿ ಅಧ್ಯಕ್ಷ ಸೇಸಪ್ಪ ಅಳದಂಗಡಿ, ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಶೇಖರ್ ಲಾಯಿಲ, ದಲಿತ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಸೇರಿದಂತೆ ಹಲವಾರು ದಲಿತ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದರು. ಅದಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದರು.

Leave A Reply

Your email address will not be published.