5 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಜಮೀನು ಮಾರಾಟಕ್ಕೆ ಬ್ರೇಕ್ | ಹೊಸ ಆದೇಶ ಹೊರಡಿಸಿದ ಭೂಮಾಪನ ಕಂದಾಯ ಇಲಾಖೆ

ಕಂದಾಯ ಇಲಾಖೆ ಹೊಸದೊಂದು ನಿಯಮವನ್ನು ಜಾರಿಗೆ ತಂದಿದೆ. ಇನ್ನು ಮುಂದೆ ಐದು ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಜಮೀನನ್ನು ಮಾರಾಟ ಮಾಡುವಂತಿಲ್ಲ. ಮಾರಾಟ ಮಾಡಿದರೆ ಫೋಡಿ ಅಥವಾ 11ಇ ನಕ್ಷೆ ದೊರೆಯುವುದಿಲ್ಲ. ಇಂತಹದೊಂದು ಆದೇಶವನ್ನು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಆಯುಕ್ತ ಮನಿಶ್ ಮೌದ್ಗೀಲ್ ಹೊರಡಿಸಿದ್ದಾರೆ.

ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಮಿತಿಯನ್ನು 3 ಗುಂಟೆಗೆ ಇಳಿಕೆ ಮಾಡಲಾಗಿದೆ. ಈ ನಾಲ್ಕು ಜಿಲ್ಲೆಗಳಲ್ಲಿ 3 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಭೂಮಿ ಮಾರಾಟ ಮಾಡಲು ಅವಕಾಶವಿಲ್ಲ. ಉಳಿದ ಜಿಲ್ಲೆಗಳಲ್ಲಿ ಕನಿಷ್ಠ 5 ಗುಂಟೆಯನ್ನು ಸರ್ಕಾರ ನಿಗದಿ ಮಾಡಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕೃಷಿ ಉದ್ದೇಶಕ್ಕೆ ಉಪಯೋಗಿಸುವ ಭೂಮಿಯ ಸರ್ವೆ ನಂಬರ್‌ಗಳಲ್ಲಿ ಕನಿಷ್ಠ ವಿಸ್ತೀರ್ಣಕ್ಕಿಂತ ಕಡಿಮೆ ಇರುವುದು ಬೆಳಕಿಗೆ ಬಂದಿದೆ. ಇದಕ್ಕೆ ಕಾರಣ ತುಂಡು-ತುಂಡು ಭೂಮಿ ಮಾರಾಟ ಅಥವಾ ರೆವಿನ್ಯೂ ಬಡಾವಣೆ ನಿರ್ಮಾಣ ಮಾಡಿ ಮಾರಾಟ ಮಾಡುತ್ತಿರುವುದು.

ನಗರಾಭಿವೃದ್ಧಿ ಕಾಯ್ದೆಯಡಿ ನಿಯಮಬದ್ಧವಾಗಿ ಅನುಮೋದನೆ ಪಡೆಯದೆ ಕೃಷಿ ಭೂಮಿಗಳನ್ನು ಸೈಟು/ ಕಟ್ಟಡಗಳಿಗಾಗಿ (ಕೃಷಿಯೇತರ ಉದ್ದೇಶಗಳಿಗಾಗಿ) ಪರಿವರ್ತಿಸುತ್ತಿದ್ದಾರೆ. ಕೃಷಿ ಉದ್ದೇಶಕ್ಕೆ ಬಳಸುವ ಬದಲು ಸೈಟುಗಳನ್ನಾಗಿ ಬಳಸಲಾಗುತ್ತಿದೆ. ಕಂದಾಯ ಲೇಔಟ್ ನಿರ್ಮಿಸಿ ಗುಂಟೆಗಳ ಲೆಕ್ಕದಲ್ಲಿ ಕೃಷಿ ಭೂಮಿಯನ್ನು ತುಂಡು ಭೂಮಿಯಾಗಿ ಮಾರಾಟ ಮಾಡುತ್ತಿದ್ದಾರೆ. ಇಂತಹ ಪ್ರವೃತ್ತಿ ನಗರ ಪ್ರದೇಶಗಳ ಸುತ್ತ-ಮುತ್ತ ಹೆಚ್ಚಾಗಿ ನಡೆಯುತ್ತಿದೆ. ನಗರೀಕರಣ ಸಾಧ್ಯವಾಗದೇ ಅವಶ್ಯಕ ಮೂಲಭೂತ ಸೌಕರ್ಯಗಳಾದ ರಸ್ತೆ, ಒಳಚರಂಡಿ, ನೀರು ಇತ್ಯಾದಿ ಪೂರೈಸಲು ಕಷ್ಟಕರವಾಗುತ್ತಿದೆ.

ಇತ್ತ ಇಂಥ ತುಂಡು ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಸಾಧ್ಯವಿಲ್ಲ. ಕಡಿಮೆ ವಿಸ್ತೀರ್ಣ ಹೊಂದಿರುವ ಸರ್ವೆ ನಂಬರ್‌ಗಳನ್ನು (ಹಿಸ್ಸಾ ನಂಬರ್) ಸೃಷ್ಟಿಸುವುದು ಕಷ್ಟವಾಗಿದೆ. ಅದಕ್ಕಾಗಿ ಇದನ್ನು ತಡೆಯುವ ಉದ್ದೇಶಕ್ಕೆ 5 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಭೂಮಿಯನ್ನು ಮಾರಾಟ ಮಾಡದಂತೆ ರಾಜ್ಯ ಸರ್ಕಾರ ತಡೆ ನೀಡಿದೆ.

ಕನಿಷ್ಠ 5 ಗುಂಟೆ ಜಮೀನು ಮಾರಾಟದ ಆದೇಶ ಸಣ್ಣ ರೈತರಿಗೆ ಕಂಟಕವಾಗಲಿದೆ. ಬಡಾವಣೆಗಳಲ್ಲಿ 1 ಗುಂಟೆಗಿಂತ ಕಡಿಮೆ ವಿಸ್ತೀರ್ಣವನ್ನು ಒಂದು ಸೈಟ್ ಲೆಕ್ಕದಲ್ಲಿ ಮಾರಾಟ ಮಾಡಲಾಗುತ್ತಿದೆ. 1 ಗುಂಟೆ ಅಥವಾ ಕಂದಾಯ ಲೇಔಟ್‌ಗೆ ಕಡಿವಾಣ ಹಾಕಬಹುದಾಗಿತ್ತು. ಈ ಆದೇಶದಿಂದ ಸಣ್ಣ ರೈತರಿಗೆ 5 ಗುಂಟೆಗಿಂತ ಕಡಿಮೆ ಭೂಮಿ ಮಾರಾಟಕ್ಕೆ ಅವಕಾಶವಿಲ್ಲ.

ಯಾರಿಗೆಲ್ಲ ವಿನಾಯಿತಿ?

ಹೊಸ ಆದೇಶಕ್ಕೂ ಮೊದಲು ಸರ್ವೆ ನಂಬರ್ ಅಥವಾ ಪಹಣಿಗಳಲ್ಲಿ ಕನಿಷ್ಠ ವಿಸ್ತೀರ್ಣಗಿಂತ ಕಡಿಮೆ ವಿಸ್ತೀರ್ಣ ಇದ್ದರೆ ಮುಂದುವರಿಯಲಿದೆ. ಅಂತಹ ಸರ್ವೆ ನಂಬರ್ ಮತ್ತು ಪಹಣಿಗಳು ಮಾನ್ಯವಾಗಿರುತ್ತವೆ. ಒಂದು ವೇಳೆ ಪಿತ್ರಾರ್ಜಿತವಾಗಿ/ಅನುವಂಶಿಕವಾಗಿ ಸ್ವೀಕರಿಸಿದ ಹಕ್ಕುಗಳು ನಿಗದಿತ ವಿಸ್ತೀರ್ಣಕ್ಕಿಂತ ಕಡಿಮೆ ಇದ್ದರೂ ಹೊಸ ಪಹಣಿ ಮತ್ತು ಫೋಡಿ ರಚಿಸಬಹುದು. ಜೊತೆಗೆ ಈಗಾಗಲೇ ಪಹಣಿಗಳಲ್ಲಿ ದಾಖಲಾದ ಮತ್ತು ಅಸ್ತಿತ್ವದಲ್ಲಿ ಇರುವ ಮಾಲೀಕರ ಹಕ್ಕುಗಳ ಪ್ರಕಾರ ಫೋಡಿಯನ್ನು ಕನಿಷ್ಠ ವಿಸ್ತೀರ್ಣಕ್ಕಿಂತ ಕಡಿಮೆ ಪ್ರಮಾಣದಲ್ಲಿ ಇದ್ದರೂ ಅನುಮತಿಸಲಾಗಿದೆ.

error: Content is protected !!
Scroll to Top
%d bloggers like this: