ಕಾಪು: ಕಾಲೇಜಿನಲ್ಲಿ ಅನ್ಯ ಕೋಮಿನ ಹುಡುಗ ಹುಡುಗಿಯೊಂದಿಗೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಹೊಡೆದಾಟದ ಸಂಸ್ಕೃತಿ ಇದೀಗ ನೆರೆ ಜಿಲ್ಲೆ ಉಡುಪಿಗೂ ಹಬ್ಬಿದ್ದು, ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ.

ಹುಡುಗಿಯೊಬ್ಬಳ ಜೊತೆ ಅನ್ಯ ಕೋಮಿನ ಹುಡುಗ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ ಈ ಹೊಡೆದಾಟ ನಡೆದಿದೆ. ಕೆಲ ಹೊತ್ತು ವಿದ್ಯಾರ್ಥಿ ಗಳ ಗುಂಪಿನ ನಡುವೆ ವಾಗ್ವಾದ ಮತ್ತು ಹೊಡೆದಾಟ ನಡೆದ ಬಳಿಕ ಪೊಲೀಸರಿಗೆ ಮಾಹಿತಿ ತಲುಪಿದೆ.

ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ, ಈ ಬಗ್ಗೆ ಸಭೆ ನಡೆಸಿ ಪ್ರಾಂಶುಪಾಲರೊಂದಿಗೂ ಮಾತನಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.