ಮಂಗಳೂರಿಗೆ ಬರಬೇಕಿದ್ದ 22 ಪ್ರಯಾಣಿಕರಿದ್ದ ಖಾಸಗಿ ಬಸ್ ಹೆದ್ದಾರಿಯಲ್ಲಿ ಸುಟ್ಟು ಭಸ್ಮ !!

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿ ಪ್ರಯಾಣಿಕರು ಪವಾಡಸದೃಶವಾಗಿ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ.

 

ಮುಂಬೈನಿಂದ ಮಂಗಳೂರು ಕಡೆಗೆ ರಾಷ್ಟೀಯ ಹೆದ್ದಾರಿ 63 ರ ಮೂಲಕ ಬಸ್ ಸಂಚರಿಸುತ್ತಿದ್ದು, 22 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗುಲಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಯಲ್ಲಾಪುರ ಠಾಣಾ ಪ್ಯಾಪ್ತಿಯಲ್ಲಿ ನಡೆದಿದ್ದು, 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

Leave A Reply

Your email address will not be published.