ದೇವಸ್ಥಾನಕ್ಕೆ ನಕಲಿ ಗುರುತಿನ ಚೀಟಿ ಬಳಸಿ ಒಳಪ್ರವೇಶಿಸಲು ಪ್ರಯತ್ನಿಸಿದ ಮುಸ್ಲಿಂ ಯುವಕ | ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಆಡಳಿತ ಮಂಡಳಿ
ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಪ್ರಸಿದ್ದ ಮಹಾಕಾಳೇಶ್ವರ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನಕ್ಕೆ ಪ್ರತಿದಿನ ಸಹಸ್ರಾರು ಭಕ್ತರು ಭೇಟಿ ನೀಡುತ್ತಾರೆ. ಇಂತಹ ದೇವಸ್ಥಾನಕ್ಕೆ ಮುಸ್ಲಿಂ ಯುವಕನೊಬ್ಬ ಪ್ರವೇಶ ಮಾಡಲು ಪ್ರಯತ್ನಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ.
ಮಹಾಕಾಳೇಶ್ವರ ದೇವಸ್ಥಾನಕ್ಕೆ ಬೇರೊಬ್ಬ ವ್ಯಕ್ತಿಯ ಗುರುತಿನ ಚೀಟಿ ಬಳಸಿ ಪ್ರವೇಶಿಸಲು ಯತ್ನಿಸಿದ 24 ವರ್ಷದ ಮುಸ್ಲಿಂ ಯುವಕನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಮೊಹಮ್ಮದ್ ಯೂನಸ್ ಎಂಬಾತನೇ ಬಂಧಿತ ಆರೋಪಿ. ಆತ ತನ್ನ ಸ್ನೇಹಿತೆಯಾದ ಖುಷ್ಬು ಯಾದವ್ ಜೊತೆಗೆ ದೇವಸ್ಥಾನಕ್ಕೆ ಬಂದಿದ್ದು, ಯೂನಸ್ ಗೆ ಇನ್ನೊಬ್ಬ ವ್ಯಕ್ತಿಯ ಗುರುತಿನ ಚೀಟಿಯ ವ್ಯವಸ್ಥೆ ಮಾಡಿದ್ದರು ಎನ್ನಲಾಗಿದೆ.
ದೇವಸ್ಥಾನದ ಆಡಳಿತ ಸಮಿತಿ ಈ ಬಗ್ಗೆ ದೂರು ನೀಡಿದ್ದು, ದೂರಿನ ಮೇರೆಗೆ ಐಪಿಸಿ ಸೆಕ್ಷನ್ 419 ಮತ್ತು 420 ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಹಾಕಾಲ್ ಪೊಲೀಸ್ ಠಾಣೆ ಪ್ರಭಾರಿ ಮುನೇಂದ್ರ ಗೌತಮ್ ತಿಳಿಸಿದ್ದಾರೆ. ಗೌತಮ್ ಅವರ ಪ್ರಕಾರ, ಆ ವ್ಯಕ್ತಿ ತನ್ನ ಮಹಿಳಾ ಸ್ನೇಹಿತೆ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಲು ಬಂದಿದ್ದೇನೆ ಎಂದು ಹೇಳಿದ್ದಾನೆ.
ಆದರೂ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.