ಶಾಲೆಯ ಶೌಚಾಲಯದ ಗೋಡೆ ಕುಸಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

Share the Article

ಖಾಸಗಿ ಶಾಲೆಯೊಂದರ ಶೌಚಾಲಯದ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಶಾಫ್ಟರ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮೃತ ಮೂರು ಮಕ್ಕಳು 8ನೇ ತರಗತಿಯಲ್ಲಿ ಓದುತ್ತಿದ್ದರು. ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಘಟನೆಯ ಬಳಿಕ ಪೊಲೀಸರು, ರಕ್ಷಣೆ ಸಿಬ್ಬಂದಿ ಹಾಗೂ ಜಿಲ್ಲಾಧಿಕಾರಿ ಬಂದು ಪರಿಶೀಲನೆ ನಡೆಸಿದ್ದಾರೆ. ಗೋಡೆ ಕುಸಿದು ಮಕ್ಕಳ ಮೇಲೆ ಬಿದ್ದ ರಭಸಕ್ಕೆ ಗೋಡೆಯ ಅವಶೇಷಗಳಡಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Leave A Reply