ಸಿಲಿಕಾನ್ ಸಿಟಿಯಲ್ಲಿ ಛತ್ರಪತಿ ಶಿವಾಜಿಗೆ ಅಪಮಾನ !! | ಪ್ರತಿಮೆಗೆ ಮಸಿ ಬಳಿದು ಕಿಡಿಗೇಡಿಗಳಿಂದ ಅಟ್ಟಹಾಸ, ವ್ಯಾಪಕ ಪೊಲೀಸ್ ಭದ್ರತೆ
ಬೆಂಗಳೂರು: ಸ್ಯಾಂಕಿ ಕೆರೆ ಸಿಗ್ನಲ್ ಬಳಿ ಇರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ನಡೆದಿದೆ.
ಘಟನೆಯಿಂದ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಸ್ಯಾಂಕಿ ಕರೆ ಸಿಗ್ನಲ್ ಬಳಿ ಇರೋ ಶಿವಾಜಿ ಪ್ರತಿಮೆಗೆ ಬಿಗಿ ಭದ್ರತೆಯನ್ನು ಒದಗಿಸಿದ್ದು,ಅಹಿತಕರ ಘಟನೆ ನಡೆಯದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.ಭದ್ರತೆಗಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಮುಜರಾಯಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ನಡೆದಿದೆ. ಯಾತ್ನಾಡಿನ ರಕ್ಷಣೆಗಾಗಿ ಹಾಗೂ ಹಿಂದೂಸ್ಥಾನವನ್ನು ಒಗ್ಗೂಡಿಸಲು ಶ್ರಮಿಸಿದ ಹೆಮ್ಮೆಯ ನಾಯಕ ಶಿವಾಜಿ ಮಹಾರಾಜರು. ಆದರೆ ಇಂತಹ ಅಪ್ರತಿಮ ವೀರರ ಪ್ರತಿಮೆಗೆ ಮಸಿ ಬಳಿದಿರುವುದು ಆಪಾದನೀಯವಾಗಿದೆ. ಪ್ರಕರಣ ಕುರಿತಾಗಿ ಸೂಕ್ತ ರೀತಿಯಲ್ಲಿ ತನಿಖೆ ನಡೆದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.