ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

Share the Article

ಬೆಂಗಳೂರು : ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ದಿ.ಎನ್.ಮುತ್ತಪ್ಪ ರೈ ಅವರ ಆಸ್ತಿ‌ ಮಾರಾಟಕ್ಕೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ.

ಎನ್‌.ಮುತ್ತಪ್ಪ ರೈ ಅವರ ಪುತ್ರರಾದ ರಾಖಿ ರೈ, ರಿಕ್ಕಿ ರೈ ಸೇರಿ 20ಮಂದಿಯನ್ನ ಪ್ರತಿವಾದಿಯನ್ನಾಗಿಸಿ ತಡೆಯಾಜ್ಞೆ ನೀಡಿದೆ.

ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ ಆಸ್ತಿಯಲ್ಲಿ ಮೂರನೇ ಒಂದು ಪಾಲು ಕೋರಿ ಕೇಸು ದಾಖಲಿಸಿದ್ದರು. ಈ ಕೇಸ್‌ಗೆ ಸಂಬಂಧಿಸಿದಂತೆ ಸಿವಿಲ್ ಕೋರ್ಟ್ ನಲ್ಲಿ ತಡೆಯಾಜ್ಞೆ ತೆರವಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಅನುರಾಧ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅನುರಾಧ ಅರ್ಜಿ ಪರಿಗಣಿಸಿದ ಕೋರ್ಟ್‌ ಯಾವುದೇ ಆಸ್ತಿ ಮಾರಾಟ ಮಾಡದಂತೆ ತಡೆಯಾಜ್ಞೆ ನೀಡಿ ಮಧ್ಯಂತರ ತೀರ್ಪು ಪ್ರಕಟಿಸಿದೆ.

ಮುತ್ತಪ್ಪ ರೈ ಅವರ ಮೊದಲ ಪತ್ನಿ ರೇಖಾ ಅವರು ನಿಧನರಾದ ಬಳಿಕ ರೈ ಅವರು ಅನುರಾಧಾ ಅವರನ್ನು ಎರಡನೇ ಮದುವೆಯಾಗಿದ್ದರು.

Leave A Reply