ಮಹಿಳಾ ಪ್ರಯಾಣಿಕರಿಗೆ ಸಿಹಿಸುದ್ದಿ | ಬಸ್, ಮೆಟ್ರೋಗಳಂತೆ ಇನ್ನು ಮುಂದೆ ರೈಲಿನಲ್ಲಿಯೂ ಮಹಿಳೆಯರಿಗಾಗಿ ಸೀಟು ಮೀಸಲು !!

ಸರ್ಕಾರದ ಯಾವುದೇ ಯೋಜನೆಗಳು ಅಥವಾ ಸೌಲಭ್ಯಗಳಿರಲಿ, ಅವುಗಳೆಲ್ಲದರಲ್ಲೂ ಮಹಿಳೆಯರಿಗೆ ವಿಶೇಷವಾದ ಮೀಸಲಾತಿ ಇದ್ದೇ ಇರುತ್ತದೆ. ಕೆಲಸದಿಂದ ಹಿಡಿದು ಸಂಸತ್ ವರೆಗೂ ಮಹಿಳೆಯರಿಗೆ ಮೀಸಲಾತಿ ಇದೆ. ಈಗ ಈ ಪಟ್ಟಿಗೆ ಹೊಸದೊಂದು ಮೀಸಲಾತಿ ಸೇರ್ಪಡೆಯಾಗಿದೆ.

ಇನ್ಮುಂದೆ ಮಹಿಳೆಯರು ರೈಲು ಪ್ರಯಾಣಕ್ಕೆ ಸೀಟಿನ ಬಗ್ಗೆ ಚಿಂತಿಸಬೇಕಾಗಿಲ್ಲ. ಬಸ್ ಮತ್ತು ಮೆಟ್ರೋ ರೈಲುಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಸೀಟುಗಳನ್ನು ಹೇಗೆ ಮೀಸಲಿಡಲಾಗಿದೆಯೋ ಅದೇ ರೀತಿ ಇದೀಗ ಭಾರತೀಯ ರೈಲ್ವೇ ಕೂಡ ಮಹಿಳೆಯರಿಗೆ ಸೀಟುಗಳನ್ನು ಮೀಸಲಿಡಲಿದೆ. ಈಗ ರೂರದ ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗಾಗಿ ವಿಶೇಷ ಬರ್ತ್‌ಗಳನ್ನು ಮೀಸಲಿರಿರುವ ಕೆಲಸ ರೇಲ್ವೆ ವಿಭಾಗ ಮಾಡಿದೆ. ದೂರದ ರೈಲುಗಳಲ್ಲಿ ಮಹಿಳೆಯರ ಆರಾಮದಾಯಕ ಪ್ರಯಾಣಕ್ಕಾಗಿ ಭಾರತೀಯ ರೈಲ್ವೇ ರಿಸರ್ವ್ ಬರ್ತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಆರಂಭಿಸಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ದೂರದ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳಲ್ಲಿ ಸ್ಲೀಪರ್ ಕ್ಲಾಸ್‌ನಲ್ಲಿ ಆರು ಬರ್ತ್‌ಗಳನ್ನು ಕಾಯ್ದಿರಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಗರೀಬ್ ರಥ, ರಾಜಧಾನಿ, ದುರಂತೋ ಸೇರಿದಂತೆ ಸಂಪೂರ್ಣ ಹವಾನಿಯಂತ್ರಿತ ಎಕ್ಸ್‌ಪ್ರೆಸ್ ರೈಲುಗಳ ಮೂರನೇ ಎಸಿ ಕೋಚ್‌ನಲ್ಲಿ (3ಎಸಿ ವರ್ಗ) ಆರು ಬರ್ತ್‌ಗಳನ್ನು ಮಹಿಳಾ ಪ್ರಯಾಣಿಕರಿಗೆ ಕಾಯ್ದಿರಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಸ್ಲೀಪರ್ ಕೋಚ್‌ನಲ್ಲಿಯೂ ಮೀಸಲಾತಿ

ಪ್ರತಿ ಸ್ಲೀಪರ್ ಕ್ಲಾಸ್‌ನಲ್ಲಿ ಆರರಿಂದ ಏಳು ಲೋವರ್ ಬರ್ತ್‌ಗಳು, ಹವಾನಿಯಂತ್ರಿತ 3 ಟೈರ್ (3 ಎಸಿ) ಕೋಚ್‌ಗಳಲ್ಲಿ ನಾಲ್ಕರಿಂದ ಐದು ಲೋವರ್ ಬರ್ತ್‌ಗಳು ಮತ್ತು ಹವಾನಿಯಂತ್ರಿತ 2 ಟೈಯರ್ (2 ಎಸಿ) ಕೋಚ್‌ಗಳಲ್ಲಿ ಮೂರರಿಂದ ನಾಲ್ಕು ಲೋವರ್ ಬರ್ತ್‌ಗಳು ಹಿರಿಯ ನಾಗರಿಕರಿಗೆ ಕಾಯ್ದಿರಿಸಲಾಗಿದೆ. 45 ವರ್ಷ ಮತ್ತು ಮೇಲ್ಪಟ್ಟ ಮಹಿಳಾ ಪ್ರಯಾಣಿಕರು ಮತ್ತು ಗರ್ಭಿಣಿಯರು ರೈಲಿನಲ್ಲಿರುವ ಆ ವರ್ಗದ ಕೋಚ್‌ಗಳ ಸಂಖ್ಯೆಯ ಆಧಾರದ ಮೇಲೆ ಕಾಯ್ದಿರಿಸುವಿಕೆಯನ್ನು ನಿರ್ವಹಿಸಲಾಗುವುದು ಎನ್ನಲಾಗಿದೆ.

ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ವಿಶೇಷ ವ್ಯವಸ್ಥೆ

ಇನ್ನೊಂದೆಡೆ, ‘ರೈಲುಗಳಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ‘ಪೊಲೀಸ್’ ಮತ್ತು ‘ಸಾರ್ವಜನಿಕ ಆದೇಶ’ ಭಾರತದ ಸಂವಿಧಾನದ ಏಳನೇ ಶೆಡ್ಯೂಲ್ ಅಡಿಯಲ್ಲಿ ರಾಜ್ಯದ ವಿಷಯಗಳಾಗಿವೆ, ಆದರೂ ಕೂಡ, ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಜಿಆರ್‌ಪಿ ಮತ್ತು ಜಿಲ್ಲಾ ಪೊಲೀಸರು ಪ್ರಯಾಣಿಕರಿಗೆ ಉತ್ತಮ ಭದ್ರತೆಯನ್ನುಒದಗಿಸಲಿದ್ದಾರೆ ಎಂದು ಸಚಿವರು ಈ ವೇಳೆ ಮಾಹಿತಿ ನೀಡಿದ್ದಾರೆ.

ಇದರೊಂದಿಗೆ ರೈಲು ಮತ್ತು ನಿಲ್ದಾಣಗಳಲ್ಲಿ ಮಹಿಳಾ ಪ್ರಯಾಣಿಕರು ಹಾಗೂ ಇತರ ಪ್ರಯಾಣಿಕರ ಸುರಕ್ಷತೆಗಾಗಿ ಜಿಆರ್‌ಪಿ ನೆರವಿನೊಂದಿಗೆ ರೈಲ್ವೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ರೈಲ್ವೇ ಸಂರಕ್ಷಣಾ ಪಡೆ ಕಳೆದ ವರ್ಷ ‘ಮೇರಿ ಸಹೇಲಿ’ ಎಂಬ ಪ್ಯಾನ್-ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸಿದ್ದು, ತಮ್ಮ ಪ್ರಯಾಣದ ಉದ್ದಕ್ಕೂ ರೈಲಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

Leave A Reply

Your email address will not be published.