ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ |ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜ.10

ಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 641ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ:
ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವೇತನ:
ಭಾರತ ಸರ್ಕಾರದ ನಿಯಮಗಳ ಅನ್ವಯ ₹ 21,700 ಆರಂಭಿಕ ವೇತನ ನೀಡಲಾಗುವುದು

ವಯಸ್ಸು ಹಾಗೂ ವಯೋಮಿತು ಸಡಿಲಿಕೆ:
ಕನಿಷ್ಠ 18, ಗರಿಷ್ಠ 35 ವರ್ಷದವರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ ವಿವರ:
ಸಾಮಾನ್ಯ / ಒಬಿಸಿ ವರ್ಗಗಳಿಗೆ ₹ 1000. ಹಾಗೂ ಮಹಿಳಾ / ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹ 300.

ನೇಮಕಾತಿ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.iari.res.in ಗೆ ಲಾಗಿನ್‌ ಆಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 10, ಜನವರಿ, 2022

ವೆಬ್‌ಸೈಟ್‌: https://www.iari.res.in

Leave A Reply

Your email address will not be published.