ಕುರಿ, ಮೇಕೆ ಘಟಕ ಸ್ಥಾಪನೆಗೆ ಪ್ರೋತ್ಸಾಹ ಧನಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬಾಗಲಕೋಟೆ: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮೇಕೆ, ಕುರಿ ಘಟಕ ಸ್ಥಾಪನೆಗೆ ಪ್ರೋತ್ಸಾಹ ಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದ,ಜಿಲ್ಲೆಗೆ 40 ಜನ ಫಲಾನುಭವಿಗಳಿಗೆ ನೀಡುವ ಗುರಿ ಹೊಂದಿದ್ದು, ಅದರಲ್ಲಿ ಪರಿಶಿಷ್ಟ ಜಾತಿ 6, ಪರಿಶಿಷ್ಟ ಪಂಗಡ 2 ಹಾಗೂ ಸಾಮಾನ್ಯ 32 ಇದೆ.

ಅರ್ಜಿ ಸಲ್ಲಿಸುವವರು ಬೆಂಗಳೂರಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರಾಗಿರಬೇಕು. 18 ರಿಂದ 60 ವರ್ಷದೊಳಗಿರಬೇಕು. ಅರ್ಜಿಯನ್ನು ಪ್ರಕಟಣೆಗೊಂಡ 15 ದಿನಗಳ ಒಳಗಾಗಿ ಸಹಾಯಕ ನಿರ್ದೇಶಕರು, ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ಪಶು ಆಸ್ಪತ್ರೆ ಆವರಣ, ಬಾಗಲಕೋಟೆ ಇವರಿಗೆ ಸಲ್ಲಿಸಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಪಶು ಸಂಗೋಪನೆ & ಪಶು ವೈದ್ಯಕೀಯ ಸೇವಾ ಇಲಾಖೆ ಇವರಿಂದ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂಸಂ. 08354-220734 & ಮೊನಂ. 8660264814ಗೆ ಸಂಪರ್ಕಿಸಬಹುದಾಗಿದೆ.

Leave A Reply

Your email address will not be published.