ಬೆಳ್ತಂಗಡಿ: ಪಟ್ರಮೆಯ ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನುಗ್ಗಿದ ಕಿಡಿಗೇಡಿಗಳು | ಶಾಲಾ ಸ್ವತ್ತುಗಳು ಧ್ವಂಸ, ಪೊಲೀಸರು ಸ್ಥಳಕ್ಕೆ ಭೇಟಿ

Share the Article

ಬೆಳ್ತಂಗಡಿ: ಪಟ್ರಮೆ ಗ್ರಾಮದ ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು ಶಾಲಾ ಸ್ವತ್ತುಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ.

ನಿನ್ನೆ ತಡರಾತ್ರಿ ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು ನಲಿಕಲಿ ತರಗತಿಯ ಕಲಿಕಾ ಸಾಮಾಗ್ರಿಗಳನ್ನು ಹಾಗೂ ಕಿಟಕಿಯ ಗಾಜುಗಳನ್ನು ಪುಡಿಗೈದು, ಶಾಲಾ ನೋಟೀಸು ಬೋರ್ಡನ್ನೂ ದ್ವಂಸಗೊಳಿಸಿದ್ದಾರೆ.

ಜೊತೆಗೆ ಶಾಲೆಗೆ ನೀರು ಸರಬರಾಜು ಮಾಡುವ ಪೈಪ್ ಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಮಾತ್ರವಲ್ಲದೆ ಶಾಲಾ ಕೈತೋಟಕ್ಕೆ ಅಳವಡಿಸಲಾದ ಕಬ್ಬಿಣದ ಬೇಲಿಯನ್ನೂ ಮುರಿದು, ನೀರಿನ ಟ್ಯಾಂಕ್ ನ ಮುಚ್ಚಳವನ್ನೂ ತೆರೆದಿಟ್ಟು ಹೋಗಿದ್ದಾರೆ. ಬೆಳಿಗ್ಗೆ ಶಾಲೆಯ ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಶಾಲೆಗೆ ಬಂದ ವೇಳೆ ದುಷ್ಕೃತ್ಯ ಬೆಳಕಿಗೆ ಬಂದಿದೆ.

ಇನ್ನು ಘಟನೆಯ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply