ರಿಲಯನ್ಸ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ | ಆರು ಲಕ್ಷದವರೆಗೆ ವಿದ್ಯಾರ್ಥಿ ವೇತನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ

ಸಮಾಜದ ಒಳಿತಿಗಾಗಿ ತಂತ್ರಜ್ಞಾನ ಅಭಿವೃದ್ಧಿ ಪಡಿಸುವ 100 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನ ನೀಡುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಿದೆ.

ಮೊದಲ ವರ್ಷ ಪದವಿಯ 60 ವಿದ್ಯಾರ್ಥಿಗಳಿಗೆ ತಲಾ 4 ಲಕ್ಷ ರೂಪಾಯಿ, 40 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತಲಾ 6 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. 2020-21ನೇ ಸಾಲಿನಲ್ಲಿ ಮೊದಲ ಬಾರಿಗೆ 76 ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್ ನೀಡಲಾಗಿತ್ತು.

ಭಾರತಾದ್ಯಂತ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಕಂಪ್ಯೂಟರ್ ಸೈನ್ಸ್, ಗಣಿತ ಮತ್ತು ಕಂಪ್ಯೂಟಿಂಗ್, ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿಯ ಅಭ್ಯಾಸ ಮಾಡುತ್ತಿರುವ ಮೊದಲ ವರ್ಷದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸಲು ಯಾವುದೇ ಪ್ರವೇಶ ಶುಲ್ಕ ಇಲ್ಲ. ತಜ್ಞರ ಜೊತೆಗಿನ ಸಂವಾದ, ಉದ್ಯಮದ ಮಾನ್ಯತೆ ಮತ್ತು ಸ್ವಯಂಸೇವಾ ಅವಕಾಶಗಳನ್ನು ಒಳಗೊಂಡಂತೆ ಅಸಾಧಾರಣ ಸಮಗ್ರ ಅಭಿವೃದ್ಧಿ ಕಾರ್ಯಕ್ರಮ ಈ ವಿದ್ಯಾರ್ಥಿ ವೇತನ ಪಡೆದವರಿಗೆ ಲಭ್ಯವಾಗಲಿದೆ.

ರಿಲಯನ್ಸ್ ಫೌಂಡೇಶನ್
ವಿದ್ಯಾರ್ಥಿವೇತನದ ಕುರಿತು ಇನ್ನಷ್ಟು  https://www.scholarships.reliancefoundation.org/ ವೆಬ್ ಸೈಟನ್ನು ಪರಿಶೀಲಿಸಬಹುದಾಗಿದೆ.

Leave A Reply

Your email address will not be published.