ಇನ್ನು ಮುಂದೆ 21 ವಯಸ್ಸಿಗೇ ‘ಎಣ್ಣೆ’ ಹೊಡಿಯೋಕೆ ಗ್ರೀನ್ ಸಿಗ್ನಲ್ !! | ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದ ಸರ್ಕಾರ

ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದಿರುವ ಹರಿಯಾಣ ರಾಜ್ಯ ಸರ್ಕಾರವು, ರಾಜ್ಯದಲ್ಲಿ ಮದ್ಯ ಸೇವನೆ ಮತ್ತು ಅದರ ಖರೀದಿ, ಮಾರಾಟದ ಕಾನೂನುಬದ್ಧ ವಯಸ್ಸನ್ನು 25 ರಿಂದ 21 ಕ್ಕೆ ಇಳಿಸಿದೆ.

ಹರಿಯಾಣ ಅಬಕಾರಿ (ತಿದ್ದುಪಡಿ) ಮಸೂದೆ- 2021 ಅನ್ನು ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಇತ್ತೀಚೆಗಷ್ಟೇ ಮದ್ಯ ಸೇವನೆ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಇಳಿಸಿದೆ. ಈ ಬೆನ್ನಲ್ಲೇ ಹರಿಯಾಣ ಸರ್ಕಾರವು ಇದೇ ರೀತಿಯ ಕಾನೂನು ರೂಪಿಸಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಅಬಕಾರಿ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ದುಷ್ಯಂತ್‌ ಚೌತಾಲ್‌ ಅವರು ಈ ಮಸೂದೆ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, ಹೊಸ ನಿಬಂಧನೆಗಳನ್ನು ಅಬಕಾರಿ ಕಾಯ್ದೆಯಲ್ಲಿ ಅಳವಡಿಸಿರುವುದರಿಂದ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯಲ್ಲಿ ಬದಲಾವಣೆ ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.‌ ಜನರು ಈಗ ಹೆಚ್ಚು ವಿದ್ಯಾವಂತರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕುಡಿಯುವ ವಿಚಾರದಲ್ಲೂ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

2021-22ರ ಅಬಕಾರಿ ನೀತಿಯನ್ನು ರೂಪಿಸುವಾಗ ದೆಹಲಿ ಸೇರಿದಂತೆ ಹಲವು ರಾಜ್ಯಗಳು ಮದ್ಯ ಸೇವನೆಯ ವಯಸ್ಸಿನ ಮಿತಿಯನ್ನು ಇಳಿಸಿವೆ. ಈ ಕುರಿತು ಆಮೂಲಾಗ್ರ ಚರ್ಚೆ ನಡೆಸಿ ಹರಿಯಾಣ ಸರ್ಕಾರವೂ ಮಸೂದೆ ತಂದಿದೆ. ಅಬಕಾರಿಗೆ ಸಂಬಂಧಿಸಿದಂತೆ 6 ಮಸೂದೆಗಳನ್ನು ಹರಿಯಾಣ ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.

error: Content is protected !!
Scroll to Top
%d bloggers like this: