ಸರಕು,ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿಗೆ ನದಿಯಲ್ಲಿ ಹಿಡಿದ ಬೆಂಕಿ | 32 ಮಂದಿ ಸಜೀವ ದಹನ

Share the Article

ದಕ್ಷಿಣ ಬಾಂಗ್ಲಾದೇಶದಲ್ಲಿ ಸರಕುಗಳು ಹಾಗೂ ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 32 ಮಂದಿ ಮೃತಪಟ್ಟಿದ್ದಾರೆ.

ರಾಜಧಾನಿ ಢಾಕಾದಿಂದ ದಕ್ಷಿಣಕ್ಕೆ 250 ಕಿಲೋಮೀಟರ್ ಜಕಾಕತಿ ನಗರದ ಬಳಿ ಈ ಘಟನೆ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್‌ ಅಧಿಕಾರಿ ಮೊಯಿನುಲ್‌ ಇಸ್ಲಾಂ, ನದಿ ಭಾಗದಲ್ಲಿ ದೋಣಿಯ ಮೂರನೇ ಮಹಡಿಯಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಇದರ ಪರಿಣಾಮ 32 ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲರ ಮೃತದೇಹ ಹೊರತೆಗೆಯಲಾಗಿದೆ.

ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದಿದ್ದಾರೆ.

Leave A Reply