ಉಡುಪಿ ಶ್ರೀಕೃಷ್ಣ ಮಠ ವಶಕ್ಕೆ ಹುನ್ನಾರ ನಡೆಸಿದ್ದರಂತೆ ಮಾಜಿ ಸಿಎಂ ಸಿದ್ಧರಾಮಯ್ಯ !! | ಕಾಂಗ್ರೆಸ್ ನಾಯಕನಿಂದಲೇ ಇದೀಗ ಗುಟ್ಟು ರಟ್ಟು

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಹುನ್ನಾರ ನಡೆಸಿತ್ತು ಎಂಬ ವಿಷಯವನ್ನು ಅವರ ಮಂತ್ರಿ ಮಂಡಲದಲ್ಲೇ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಬಹಿರಂಗಪಡಿಸಿದ್ದಾರೆ.

 

ಕೃಷ್ಣ ಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ‘ವಿಶ್ವಾರ್ಪಣಂ’ ಕಾರ್ಯಕ್ರಮದಲ್ಲಿ ಗುರುವಾರ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಈ ಮಾಹಿತಿ ನೀಡಿದ್ದಾರೆ.

ಹಿಂದಿನ ಸರ್ಕಾರ ಕೃಷ್ಣ ಮಠವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಯೋಚನೆ ಮಾಡಿತ್ತು. ಈ ಸುದ್ದಿ ತಿಳಿದ ತಕ್ಷಣ ಮುಖ್ಯಮಂತ್ರಿಯವರನ್ನು ಸಂಪರ್ಕಿಸಿ, ‘ಉಡುಪಿ ಕೃಷ್ಣ ಮಠಕ್ಕೆ ಏನಾದರೂ ತೊಂದರೆಯಾದರೆ ಶಾಸಕ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಡುವವ ನಾನಾಗಿರುತ್ತೇನೆ’ ಎಂಬುದಾಗಿ ಹೇಳಿ ಈ ಪ್ರಸ್ತಾವನೆಗೆ ಪೂರ್ಣವಿರಾಮ ಹಾಕುವ ಸಣ್ಣ ಸೇವೆ ಮಾಡಿದ್ದೇನೆ. ಈ ಬಗ್ಗೆ ನನಗೆ ತೃಪ್ತಿ ಇದೆ ಎಂದು ಹೇಳಿದರು.

ಉಡುಪಿ ಕೃಷ್ಣ -ಮುಖ್ಯಪ್ರಾಣ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಕ್ಕೆ ಕೆಲವರು ನನ್ನನ್ನು ಶಾಸಕ ಸ್ಥಾನದಿಂದ ಅನೂರ್ಜಿತಗೊಳಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಹಾಕಿದ್ದರು. ಇದರಿಂದ ನನಗೇ ತೊಂದರೆಯಾಗಿಲ್ಲ. ಆದರೆ ಇಂಥ ಮನಸ್ಥಿತಿಯ ಜನರೂ ಜಗತ್ತಿನಲ್ಲಿದ್ದಾರೆ ಎಂದು ಪ್ರಮೋದ್ ಹೇಳಿದರು.

Leave A Reply

Your email address will not be published.