ಬೆಳ್ತಂಗಡಿ: 37 ವರ್ಷದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

Share the Article

ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಬನದಬೈಲು ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬನದಬೈಲು ನಿವಾಸಿ ಗೋಪಾಲ ಗೌಡ (37) ಎಂದು ತಿಳಿದುಬಂದಿದೆ.

ಗೋಪಾಲ ಅವರಿಗೆ ನಿನ್ನೆ ರಾತ್ರಿ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದಾರೆ. ಇದೀಗ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಾಸಕರ ಮುಖಾಂತರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರು ವೃತ್ತಿಯಲ್ಲಿ ಕೃಷಿಕರಾಗಿದ್ದು, ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ.

Leave A Reply