ನಿರಂತರ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಧನ ಸಹಾಯಕ್ಕೆ ಅರ್ಜಿ ಆಹ್ವಾನ|ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜ.8

ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2021-22ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ, ಮುಂತಾದ ಅಸಂಘಟಿತ ತಂಡಗಳು, ಏಕವ್ಯಕ್ತಿ ಕಲಾವಿದರಿಗೆ ವಾದ್ಯಪರಿಕರ, ವೇಷಭೂಷಣ ಖರೀದಿಗೆ ಧನ ಸಹಾಯ ಹಾಗೂ ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನ ಸಹಾಯ ನೀಡಲಾಗುವುದು.

ಈ ಮೂರು ಯೋಜನೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು sevasindhu.karnataka.gov.in ಫೋರ್ಟಲ್ ಮುಖಾಂತರ ಇದೇ ಡಿಸೆಂಬರ್ 25 ರಿಂದ 2022ರ ಜನವರಿ 08 ರವರೆಗೆ ಕಾಲಾವಕಾಶ ನೀಡಿ ಸಾಂಸ್ಕಂತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿ, ಸಂಘಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಮಾರ್ಗಸೂಚಿಯನ್ನು ಹಾಗೂ ಸೇವಾಸಿಂಧು ಪೋರ್ಟಲ್ ಹಾಗೂ www.kannadasiri.karnataka.gov.in ಇಲಾಖೆಯ ವೆಬ್‍ಸೈಟ್‍ನಲ್ಲಿ ಅಳವಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 9380206704, 8088304588 ಹಾಗೂ ಆಯಾ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸೇವಾಸಿಂದು ಇವರನ್ನು ಸಂಪರ್ಕಿಸಬಹುದು. ನಿಗಧಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ ತಿಳಿಸಿದ್ದಾರೆ.

Leave A Reply

Your email address will not be published.