ಧ್ವಜಾರೋಹಣ ವೇಳೆ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ | ಫ್ಲಾಗ್ ಕ್ಯಾಚ್ ಹಿಡಿದ ಸೋನಿಯಾ ಗಾಂಧಿಯ ವೀಡಿಯೋ ವೈರಲ್ !!

ಕಾಂಗ್ರೆಸ್ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಧ್ವಜ ಕೆಳಗೆ ಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ.

 

ಕಾಂಗ್ರೆಸ್‌ನ ಪ್ರಧಾನ ಕಚೇರಿಯಲ್ಲಿ ಪಕ್ಷದ 137ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಗಿತ್ತು. ಆ ಸಮಯದಲ್ಲಿ ಕಾಂಗ್ರೆಸ್‌ನ ಧ್ವಜಾರೋಹಣ ಮಾಡಲು ಸೋನಿಯಾ ಗಾಂಧಿ ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಧ್ವಜ ಕೆಳಗೆ ಬಿದ್ದಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಧ್ವಜವನ್ನು ಹಾರಿಸಲು ಮುಂದಾದರು. ಈ ವೇಳೆ ಕಂಬಕ್ಕೆ ಕಟ್ಟಿರುವ ಹಗ್ಗವು ಸಿಲುಕಿಕೊಂಡಿದೆ. ಅಲ್ಲಿದ್ದ ಕಾರ್ಯಕರ್ತರೊಬ್ಬರು ಸೋನಿಯಾ ಗಾಂಧಿ ಅವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಅವರು ಧ್ವಜವನ್ನು ಸರಿಮಾಡಲು ಪ್ರಯತ್ನಿಸಿದಾಗ, ಧ್ವಜವು ಕೆಳಗೆ ಬಿದ್ದಿದೆ. ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.

ಕೊನೆಗೆ ಪಕ್ಷದ ಖಜಾಂಚಿ ಪವನ್ ಬನ್ಸಾಲ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸೋನಿಯಾ ಗಾಂಧಿ ಅವರು ಪಕ್ಷದ ಧ್ವಜವನ್ನು ಕೈಯಲ್ಲಿ ಹಿಡಿದು ಪ್ರದರ್ಶಿಸಿದರು. ನಂತರ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಪಕ್ಷದ ಧ್ವಜವನ್ನು ಹಾರಿಸಲು ಧ್ವಜಸ್ತಂಭವನ್ನು ಏರಿದರು. ಪಕ್ಷದ ಕೇಂದ್ರ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರರಿದ್ದರು.

Leave A Reply

Your email address will not be published.