ಬದಲಾದ ನೈಟ್ ಕರ್ಫ್ಯೂ ಮಾರ್ಗಸೂಚಿ | ಹೋಟೆಲ್ ಮಾಲೀಕರು ಕೊಂಚ ರಿಲ್ಯಾಕ್ಸ್

ಬೆಂಗಳೂರು:ಕರ್ನಾಟಕ ಸರ್ಕಾರ ಡಿಸೆಂಬರ್ 28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯ ತನಕ ನೈಟ್ ಕರ್ಫ್ಯೂ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ.ಆದರೆ ಈ ಆದೇಶಕ್ಕೆ ಹೋಟೆಲ್ ಮಾಲೀಕರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ

ನೈಟ್ ಕರ್ಫ್ಯೂ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಮಂಗಳವಾರ ಆದೇಶ ಹೊರಡಿಸಿದ್ದು ಹೋಟೆಲ್, ಬಾರ್, ರೆಸ್ಟೋರೆಂಟ್, ಪಬ್, ಮನೋರಂಜನಾ ತಾಣಗಳಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಶೇ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಹೇಳಿತ್ತು.ಇದರಿಂದಾಗಿ ಹೋಟೆಲ್ ಮಾಲೀಕರು ನಿರಾಳರಾಗಿದ್ದಾರೆ.ಇದರಿಂದಾಗಿ ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ.

ಪರಿಷ್ಕೃತ ಮಾರ್ಗಸೂಚಿ:

ಮಂಗಳವಾರದ ಪರಿಷ್ಕೃತ ಮಾರ್ಗಸೂಚಿಯ ಅನ್ವಯ ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಆಹಾರ ಮತ್ತು ಪಾನೀಯ ಒದಗಿಸುವ ಸ್ಥಳಗಳಲ್ಲಿ ಮಾತ್ರ ಆಸನಗಳ ಶೇ 50ರಷ್ಟು ಸೇವೆ ನೀಡಬೇಕು.ಉಳಿದಂತೆ ಹೋಟೆಲ್‌ಗಳಲ್ಲಿನ ಕೋಣೆಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ. ಕೋಣೆಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಬಹುದಾಗಿದೆ. ಹೋಟೆಲ್‌ಗಳಲ್ಲಿ ವಾಸ್ತವ್ಯಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ.

ನೈಟ್ ಕರ್ಫ್ಯೂ ಅವಧಿಯಲ್ಲಿ ಅನಗತ್ಯ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬೆಂಗಳೂರು ನಗರದ ಫ್ಲೈ ಓವರ್‌ಗಳನ್ನು ಬಂದ್ ಮಾಡಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.ತುರ್ತು ಸಂದರ್ಭದಲ್ಲಿ ಜನರು ಸಂಚಾರ ನಡೆಸಬಹುದಾಗಿದೆ. ಆಸ್ಪತ್ರೆ, ಮೆಡಿಕಲ್, ತುರ್ತು ಸೇವೆಗಳಿಗೆ ಯಾವುದೇ ನಿರ್ಬಂಧವನ್ನು ಸರ್ಕಾರ ಹೇರಿಲ್ಲ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ಮಾಡುವುದಕ್ಕೆ ನಿಷೇಧ ಹೇರಲಾಗಿದೆ.

ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯ ಬಳಿಕ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಲು ತೀರ್ಮಾನಿಸಲಾಯಿತು.ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪೊಲೀಸರು ನೈಟ್ ಕರ್ಫ್ಯೂವನ್ನು ಕಠಿಣವಾಗಿ ಜಾರಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರದ ಆದೇಶದಂತೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನೈಟ್ ಕರ್ಫ್ಯೂ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ, “ಸಾರ್ವಜನಿಕ ಸ್ಥಳಗಳಲ್ಲಿ ಹೊಸವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 28 ರಿಂದ ಜನವರಿ 7ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ನಿಷೇಧಾಜ್ಞೆ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.ನೈಟ್ ಕರ್ಫ್ಯೂ ಅವಧಿಯಲ್ಲಿ ಸಂಚಾರ ನಡೆಸುವ ಜನರು ಗಸ್ತಿನಲ್ಲಿರುವ ಪೊಲೀಸರಿಗೆ ಸೂಕ್ತ ದಾಖಲೆ ತೋರಿಸಬೇಕು. ಕಂಪನಿಗಳ ಉದ್ಯೋಗಿಗಳು ಐಡಿ ಕಾರ್ಡ್ ಹೊಂದಿರಬೇಕು. ಬಸ್, ರೈಲು, ವಿಮಾನ ಪ್ರಯಾಣಿಕರು ಟಿಕೆಟ್ ತೋರಿಸಿ ಸಂಚಾರ ನಡೆಸಬೇಕಿದೆ.

Leave A Reply

Your email address will not be published.