ಉಪ್ಪಿನಂಗಡಿ:ಬೆಳ್ಳಂಬೆಳಗ್ಗೆ ತನ್ನ ಪತ್ನಿಗೆ ಕತ್ತಿಯಿಂದ ಕಡಿದ ಪತಿ!! ಹಲ್ಲೆಯಿಂದ ಗಂಭೀರ ಗಾಯಗೊಂಡ ಪತ್ನಿ ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಸಮೀಪ ಪತಿಯೋರ್ವ ತನ್ನ ಪತ್ನಿಗೆ ಕತ್ತಿಯಿಂದ ಕಡಿದು ಗಂಭೀರಗೊಳಿಸಿದ ಘಟನೆ ಇಂದು ಮುಂಜಾನೆ ನಡೆದಿದ್ದು, ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೆರ್ನೆ ಹನುಮಾಜೆ ನಿವಾಸಿ ಶ್ರೀನಿವಾಸ್ ಎಂಬವರು ತನ್ನ ಪತ್ನಿ ಲಕ್ಷ್ಮಿ(60) ಎಂಬವರಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗಾಯಳುವನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲ್ಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

Leave A Reply

Your email address will not be published.