ಶಿರಾಡಿ ಘಾಟ್ ನ ಕೆಂಪುಹೊಳೆ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

Share the Article

ಮಹಿಳೆಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನ ರಾಜ್‌ಘಾಟ್ ಸಮೀಪ ಕೆಂಪುಹೊಳೆ ಅರಣ್ಯದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.

ಮೃತ ಮಹಿಳೆಯ ಪ್ರಾಯ 30-35 ಎಂದು ಅಂದಾಜಿಸಲಾಗಿದ್ದು, ಮಹಿಳೆಯ ಕೊಳೆತ ಶವ ಮಕಾಡೆ ಮಲಗಿದ ರೀತಿಯಲ್ಲಿ ಪತ್ತೆಯಾಗಿದೆ.

ಸಕಲೇಶಪುರದಿಂದ ಗುಂಡ್ಯಕ್ಕೆ ನಂದೀಶ್ ಎಂಬವರು ಬೈಕ್‌ನಲ್ಲಿ ಹೋಗುತ್ತಿದ್ದಾಗ, ಶಿರಾಡಿ ಘಾಟ್‌ನ ರಾಜ್‌ಘಾಟ್ ಸಮೀಪ ಕೆಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಬೈಕ್ ನಿಲ್ಲಿಸಿ ಪಕ್ಕ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಕಂಡುಬಂದಿದೆ.

ಮೃತದೇಹವನ್ನು ಸಕಲೇಶಪುರ ಕ್ರಾಪರ್ಡ್ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಈ ಬಗ್ಗೆ ಗಿರೀಶ್‌ರವರು ನೀಡಿದ ದೂರಿನಂತೆ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply