ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ನಲ್ಲಿ ಇತಿಹಾಸ ನಿರ್ಮಿಸಿದ ಭಾರತ | ಆಫ್ರಿಕನ್ನರ ವಿರುದ್ಧ 113 ರನ್ ಗಳ ಭರ್ಜರಿ ಜಯ ಸಾಧಿಸಿದ ಕೊಹ್ಲಿ ಪಡೆ

Share the Article

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 113 ರನ್ ಗಳ ಭರ್ಜರಿ ಜಯ ಸಾಧಿಸಿ ಇತಿಹಾಸ ನಿರ್ಮಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಸೆಂಚುರಿಯನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿದ್ದ 305ರನ್ ಗಳ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 191 ರನ್ ಗಳಿಗೆ ಆಲೌಟ್ ಆಗಿ ಭಾರತದ ಎದುರು 113 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಅಂತೆಯೇ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ ಪಡೆ 1-0 ಮುನ್ನಡೆ ಸಾಧಿಸಿದೆ.

ಭಾರತ ನೀಡಿದ್ದ 305 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಭಾರತೀಯ ಬೌಲರ್ ಗಳ ಅಕ್ಷರಶಃ ಕಾಡಿದರು. ಡೀನ್ ಎಲ್ಗಾರ್ (77ರನ್) ಅವರ ಅರ್ಧಶತಕ ಮತ್ತು ಟೆಂಬಾ ಬವುಮಾ (36 ರನ್) ಸಮಯೋಚಿತ ಪ್ರದರ್ಶನದ ಹೊರತಾಗಿಯೂ ದಕ್ಷಿಣ ಆಫ್ರಿಕಾ ತಂಡ ಪಂದ್ಯವನ್ನು ಕೈ ಚೆಲ್ಲಿತು.

ಪ್ರಮುಖವಾಗಿ ಭಾರತ ಮಹಮದ್ ಶಮಿ ಮತ್ತು ಜಸ್ ಪ್ರೀತ್ ಬುಮ್ರಾ ಆಫ್ರಿಕನ್ನರನ್ನು ಇನ್ನಿಲ್ಲದಂತೆ ಕಾಡಿದರು. ಇಬ್ಬರೂ ಬೌಲರ್ ಗಳು ತಲಾ 3 ವಿಕೆಟ್ ಪಡೆದರೆ, ಅಂತಿಮ ದಿನದ ಹೀರೋ ಆರ್ ಅಶ್ವಿನ್ ಅಂತಿಮ ಓವರ್ ನಲ್ಲಿ ಬ್ಯಾಕ್ ಟು ಬ್ಯಾಕ್ 2 ವಿಕೆಟ್ ಪಡೆದು ಆಫ್ರಿಕಾ ಇನ್ನಿಂಗ್ಸ್ ಗೆ ತೆರೆ ಎಳೆದು, ಭಾರತಕ್ಕೆ ಗೆಲುವು ತಂದುಕೊಟ್ಟರು.

Leave A Reply